Saturday, March 14, 2026
Flats for sale
Homeಜಿಲ್ಲೆಸುಳ್ಯ : ಸುಳ್ಯದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ.

ಸುಳ್ಯ : ಸುಳ್ಯದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ.

ಸುಳ್ಯ : ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಜನರ ಸಮಸ್ಯೆಗಳನ್ನು ಪರಿಹರಿಸಲು ಬದ್ಧವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ದ.ಕ.ಜಿಲ್ಲಾಡಳಿತದ ವತಿಯಿಂದ ಸುಳ್ಯದ ಕೆವಿಜಿ ಪುರಭವನದಲ್ಲಿ ಜ.23ರಂದು ಮಂಗಳವಾರ ನಡೆದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವೇ ಜನರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕಾರ್ಯಕ್ರಮ ಜನತಾದರ್ಶನ ಎಂದರು. ರಾಜ್ಯ ಸರ್ಕಾರವು ತನ್ನ ಐದು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.

ಸುಳ್ಯ ಶಾಸಕ ಭಾಗೀರಥಿ ಮುರುಳ್ಯ, ಎಂಎಲ್ ಸಿ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಪಂ ಸಿಇಒ ಡಾ.ಆನಂದ್, ಹೆಚ್ಚುವರಿ ಡಿಸಿ ಸಂತೋಷ್ ಕುಮಾರ್, ಡಿಎಫ್‌ಒ ಆ್ಯಂಟನಿ ಮರಿಯಪ್ಪ, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ, ತಹಶೀಲ್ದಾರ್ ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular