ಮಂಡ್ಯ : ಗ್ರಾಮದಲ್ಲಿ ಹಾರಿಸಲಾಗಿರುವ ಹನುಮ ಧ್ವಜವನ್ನು ತೆರವುಗೊಳಿಸಲು ಬಂದಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಕೆರಗೋಡು ಎಂಬಲ್ಲಿ ನಡೆದಿದೆ.ಹನುಮ ಕೇಸರಿ ಧ್ವಜದಲ್ಲೂ ರಾಜಕೀಯ ಬೇಡ ಹೀಗಾಗಿ ಹನುಮ ಧ್ವಜಸ್ಥಂಬ ಇರಲಿ ಎಂದು ಮುಸ್ಲಿಂ ಸಮುದಾಯ ಕೂಡ ಬೆಂಬಲಿಸಿತ್ತು.ಈ ಸಂಬಂಧ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾದ ಹಿನ್ನೆಲೆ ಮಂಡ್ಯದ ಎಸಿ ಶಿವಮೂರ್ತಿ ಹಾಗೂ ತಹಶೀಲ್ದಾರ್ ಶಿವಕುಮಾರ್ ನೇತೃತ್ವದಲ್ಲಿ ಹನುಮ ಧ್ವಜ ಇಳಿಸಲಾಗಿದೆ .ಇನ್ನು ಹನುಮ ಧ್ವಜ ಇಳಿಸುವ ವೇಳೆ ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್ ಮಾಡಲಾಯ್ತು. ಧ್ವಜ ಇಳಿಸುತ್ತಿದ್ದಂತೆ ಗ್ರಾಮಸ್ಥರು ಕಣ್ಣೀರು ಹಾಕಿದ್ದಾರೆ.

ಜನವರಿ 22 ರಂದು ಅಯ್ಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ನಡೆದ ಹಿನ್ನೆಲೆ ಗ್ರಾಮದಲ್ಲಿ ನೆನಪಿಗಾಗಿ ಹಾರಿಸಲಾದ ಹನುಮ ಧ್ವಜವನ್ನು ತೆರವಿಗೆ ಅಧಿಕಾರಿಗಳು ಬಂದಿದ್ದು ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಧ್ವಜವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿಯಾಗಿದೆ. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಗ್ರಾಮದಲ್ಲಿ ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಧ್ವಜ ಹಾರಾಟದ ಬಗ್ಗೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು.ಹಿರಿಯ ಅಧಿಕಾರಗಳ ಮೌಖಿಕ ಆದೇಶದಂತೆ ಧ್ವಜಸ್ಥಂಭ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗ್ರಾಮಕ್ಕೆ ಆಗಮಿಸಿದ್ದರು ಆದರೆ ಗ್ರಾಮ ಪಂಚಾಯತ್ ಸದಸ್ಯರು ನಡಾವಳಿ ರಚಿಸಿ, ವಿವಾದ ಇತ್ಯರ್ಥ ಪಡಿಸಿದ್ದರು.ಆದರೆ ಸರ್ಕಾರಿ ಜಾಗದಲ್ಲಿ ಧ್ವಜಸ್ಥಂಭ ನೆಡಲಾಗಿದೆ ಎಂಬ ಕಾರಣ ನೀಡಿ ಕೆಲ ದಿನಗಳ ನಂತರ ಮೇಲಾಧಿಕಾರಿಗಳು ಧ್ವಜ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಪ್ರಾಣ ಬಿಟ್ಟರು ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು ಅಲ್ಲದೇ ಇದರ ಹಿಂದೆ ಕಾಂಗ್ರೆಸ್ ಶಾಸಕ, ಸಚಿವರ ಷಡ್ಯಂತ್ರ ಇದೆ ಎಂದು ಆರೋಪ ಮಾಡಿದರು. ರಾಮ ಮಂದಿರ ಉದ್ಘಾಟನೆ ಬಳಿಕ ಕಾಂಗ್ರೆಸ್ಸಿಗರಿಗೆ ಕೇಸರಿ ಕಂಡರೆ ಆಗುತ್ತಿಲ್ಲ. ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಹನುಮ ಧ್ವಜ ಇಳಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.ನಸುಕಿನ ಜಾವ 3 ಗಂಟೆಗೆ ಗ್ರಾಮಕ್ಕೆ ಮಂಡ್ಯ ಎಸಿ ಶಿವಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಬಿರಾದರ್ ಆಗಮಿಸಿ ಧ್ವಜ ತೆರವುಗೊಳಿಸುವ ಯತ್ನಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದಾರೆ.
ಕೆರೆಗೋಡು ಗ್ರಾಮಸ್ಥರಿಗೆ ಸಾಥ್ ನೀಡಲು ಹಲವೆಡೆಯಿಂದ ಹಿಂದೂ ಕಾರ್ಯಕರ್ತರು ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ಕೆರೆಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಗ್ರಾಮದಲ್ಲಿ144 ಸೆಕ್ಷನ್ ಜಾರಿ ಜಾರಿಯಲ್ಲಿದೆ. ಐದಕ್ಕೂ ಹೆಚ್ಚು ಜನ ಸೇರುವಂತಿಲ್ಲ, ದಯವಿಟ್ಟು ಹೊರಡಿ ಎಂದು ಪೊಲೀಸರು ಮನವಿ ಮಾಡುತ್ತಿದ್ದಾರೆ.


