ಮಂಗಳೂರು : ಮಂಗಳೂರಿನಲ್ಲಿ ಈ ಹಿಂದೆ ಮುಂದೂಡಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶವು ಫೆಬ್ರವರಿ 17 ರಂದು ನಡೆಯಲಿದೆ.
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಲೋಕಸಭೆ ಚುನಾವಣೆಯ ದೃಷ್ಟಿಯಿಂದಲೂ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ ಯೋಜನೆಗಳನ್ನೂ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಜನಸಾಮಾನ್ಯರ ಮನೆಗೆ ಸರಕಾರದ ಕಾರ್ಯವೈಖರಿಯನ್ನು ತಲುಪಿಸುವ ಕೆಲಸ ನಡೆಯಬೇಕಿದೆ ಎಂದು ಹೇಳಿದ್ದಾರೆ .
ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದ್ದಾರೆ .


