Sunday, March 15, 2026
Flats for sale
Homeರಾಜ್ಯಬೆಂಗಳೂರು : ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು .

ಬೆಂಗಳೂರು : ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು .

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ತೆಗೆದುಕೊಂಡಿದ್ದು, ರಾಜಾಜಿನಗರದ ಹರಿಶ್ಚಂದ್ರ ಘಾಟ್ ಬಳಿ ಇಂದು ಬೆಳಿಗ್ಗೆ ಬಿಎಂಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.

ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸAಗ ಮಾಡುತ್ತಿದ್ದ ಮಲ್ಲೇಶ್ವರಂನ ಕುಸುಮಿತಾ (೨೧) ಮೃತಪಟ್ಟವರು . ಎಂದಿನAತೆ ಕಾಲೇಜಿಗೆ ಹೋಗಲು ಮಲ್ಲೇಶ್ವರಂನಿAದ ಹರಿಶ್ಚಂದ್ರಘಾಟ್‌ಗೆ ಸ್ಕೂಟರ್ ನಲ್ಲಿ ಬೆಳಗ್ಗೆ ೮.೩೦ಕ್ಕೆ ಬರುತ್ತಿದ್ದ ಯುವತಿ,ಬಳಿಕ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.ಬಳಿಕ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ,

ಮೃತದೇಹವನ್ನು ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಿದ್ದು ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಸಿರಿಗೌರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular