ಬೆಂಗಳೂರು : ಈ ವಿದ್ಯಾರ್ಥಿಗಳೇ ಇಷ್ಟು ಲೈಸನ್ಸ್ ಇಲ್ಲದೆ ಅಡ್ಡಾದಿಡ್ಡಿ ವಾಹನ ಚಲಾಹಿಸುವುದಲ್ಲದೆ ನಿಧಾನವಾಗಿ ಹೋಗುವ ವಾಹನ ಚಾಲಕರ ಪ್ರಾಣಕ್ಕೆ ಕುತ್ತು ತಂದ ಘಟನೆ ಎಷ್ಟೋ ನಡೆದಿದ್ದು ಪೊಲೀಸ್ ಇಲಾಖೆ ಈಗ ಎಚ್ಚೆತ್ತುಕೊಂಡಿದೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿರುವ ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 629 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪೋಷಕರು ಮತ್ತು ವಾಹನ ಮಾಲೀಕರ ವಿರುದ್ಧ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ದಂಡ ವಿಧಿಸಿದ್ದಾರೆ.
ಶಾಲಾ-ಕಾಲೇಜು ಬಳಿ ವೇಗವಾಗಿ,ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.18 ವರ್ಷಕ್ಕಿಂತ ಕೆಳಮಟ್ಟದ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಹಾಗೂ ಇನ್ನಿತರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ. ಅವರುಗಳ ಬಳಿ ಪರವಾನಗೆ ಸಹ ಇರುವುದಿಲ್ಲ. ಆದರೂ ವಾಹನಗಳನ್ನು ತೆಗೆದುಕೊಂಡು ರಸ್ತೆಗಿಳಿಯುತ್ತಿರುವುದರಿಂದ ಅನಾಹುತಗಳು ಸಂಭವಿಸುತ್ತಿವೆ ಎಂದು ಜಾಗೃತಿ ಮೂಡಿಸಿದ್ದಾರೆ.
ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ 401 ಪ್ರಕರಣ, ಟ್ರಿಪಲ್ ರೈಡಿಂಗ್ 39 ಮತ್ತು ಪುಟ್‌ಪಾತ್ ಮೇಲೆ ರೈಡಿಂಗ್ ಮಾಡಿದ 35 ಸವಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಒಂದೇ ದಿನದಲ್ಲಿ ನಗರದಲ್ಲಿ 1800 ಮಕ್ಕಳ ಪೋಷಕರಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ನಗರ ಪ್ರದೇಶದ ವ್ಯಾಪ್ತಿಯ 150 ಕ್ಕೂ ಹೆಚ್ಚು ಶಾಲೆಗಳಲ್ಲಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಯಮ ಉಲ್ಲಂಘನೆ ಮಾಡಿರೋದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


