ಮಂಡ್ಯ : ಅತೀಯಾದ ವೇಗ ಅಪಘಾತಕ್ಕೆ ಕಾರಣ ಎಂಬ ಗಾದೆ ಮಾತು ನೂರಕ್ಕೂ ನೂರರಷ್ಟು ಸತ್ಯ. ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ವರದಿಯಾಗಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30ವ), ಪವನ್ ಶೆಟ್ಟಿ (32ವ) ಹಾಗೂ ಚಿರಂಜೀವಿ (32ವ) ಮೃತಪಟ್ಟವರು.
ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ . ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


