ನವದೆಹಲಿ : ಇನ್ನೂ ಭಾರತ ದೇಶವನ್ನು ಎಷ್ಟು ತುಂಡು ಗಳನ್ನಾಗಿ ಮಾಡುತ್ತಿರಾ? ಇಷ್ಟು ಒಡೆದಿರುವುದು ಸಾಕಾಗಿಲ್ವಾ ?ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇಂದು ಈ ಬಾರಿ ಲೋಕಸಭೆಯ ಕೊನೆಯ ಭಾಷಣದಲ್ಲಿ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿ ಸಂಸದ ಡಿಕೆ ಸುರೇಶ್ ರವರನ್ನು ಹಿಗ್ಗಾಮುಗ್ಗಾ ಜಾಡಿಸಿದ ಘಟನೆ ನಡೆದಿದೆ. ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ದೇಶವನ್ನು ಈಗಾಗಲೇ ವಿಭಜನೆ ಮಾಡಿದ್ದೀರಿ. ಹಿಂದಿನಿಂದಲೂ ವಿಭಜನೆ ಮಾಡುತ್ತಲೇ ಆಡಳಿತ ನಡೆಸಿದ್ದೀರಿ. ಮುಂದೆ ದೇಶವನ್ನು ಇನ್ನೆಷ್ಟು ಭಾಗ ಮಾಡಲು ಹೊರಟಿದ್ದೀರಿ. ಒಬ್ಬ ಕಾಂಗ್ರೆಸ್ ಸಂಸದ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡುತ್ತಿದ್ದಾರೆ. ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಎಂದು ಪ್ರಧಾನಿಗಳು ಪ್ರಶ್ನಿಸಿದರು.
60 ವರ್ಷದಿಂದ ನೀವು ಇದನ್ನೇ ಮಾಡಿ ಅಧಿಕಾರಕ್ಕೆ ಬಂದು ಬಿಟ್ರಿ ,ಇನ್ನಾದರೂ ಬದಲಾಗಿ ಹೇಳುತ್ತಾ ಕಾಂಗ್ರೆಸ್ನವರು ಎಂದೂ ಕೂಡ ದೇಶವನ್ನು ಜೋಡಿಸಿಲ್ಲ. ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ನೆಹರು ಹೊರಟು ಹೋದ್ರು, ಆದ್ರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದು ಟಾಂಗ್ ಕೊಟ್ಟರು. ಬಜೆಟ್ ಕುರಿತು ಟೀಕಿಸುತ್ತಾ ಆಡಿದ ಪ್ರತ್ಯೇಕ ರಾಷ್ಟ್ರದ ಮಾತು ಕಾಂಗ್ರೆಸ್ ಬಿಜೆಪಿ ಮಧ್ಯೆ ಮತ್ತೊಂದು ಜಟಾಪಟಿಗೆ ಕಾರಣವಾಗಿದೆ.


