ಮಂಗಳೂರು : ಇತ್ತೀಚಿನ ದಿನಗಳಲ್ಲಿ ಸರಕಾರಿ ಹಾಸ್ಟೆಲ್ನಲ್ಲಿ ಊಟ ಸೇವಿಸಿ ಅಸ್ವಸ್ಥರಾಗುವುದು ಸಹಜವಾಗಿದೆ ಆದರೆ ಖಾಸಗಿ ಹಾಸ್ಟೆಲ್ ಗಳಲ್ಲಿ ಇಷ್ಟು ಶುಲ್ಕ ಕೊಟ್ಟು ವಿಷಪೂರಿತ ಆಹಾರ ಸೇವಿಸುವುದೆಂದರೆ ವಿಪರ್ಯಾಸ ಇಂತಹ ಒಂದು ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿ ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.
ಪ್ರಸ್ತುತ ಕೇರಳಮೂಲದ ಅತಿಹೆಚ್ಚು ವಿದ್ಯಾರ್ಥಿಗಳು ಇರುವುದರಿಂದ ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದ್ದು ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


