ಚಿತ್ರದುರ್ಗ : ಆರ್ ಎಸ್ ಎಸ್ ನಲ್ಲಿ ತರಬೇತಿ ಪಡೆದಿದ್ದೇನೆ ಎಂದು ಹೇವರು ಹೊಡಿ, ಬಡಿ, ಕೊಲ್ಲು ಎನ್ನುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅದು ಮಾತಾಡುತ್ತಾರೆ ಅವರ ಹೇಳಿಕೆ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಹೊಸದುರ್ಗದ ಭಗೀರಥ ಗುರುಪೀಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜಿಸುವವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ರೂಪಿಸಬೇಕು ಎಂದು ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿ, ಈಶ್ವರಪ್ಪ ಹೇಳಿಕೆ ನೋಡಿದರೆ ಆರ್ ಎಸ್ ಎಸ್ ಎಂತಹ ಪಾಠ ಕಲಿಸುತ್ತದೆ ಎಂದು ತಿಳಿಯುತ್ತಿದೆ. ಸಂಸದ ಡಿ.ಕೆ. ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಅಂತಿದ್ದಾರೆ. ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಈ ರೀತಿ ಹೇಳಿಕೆಗಳನ್ನು ನೀಡುತ್ತಾರೆ. ಇವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕಾ ಎಂದು ಪ್ರಶ್ನಿಸಿದರು.
ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡುವ ಬದಲು ನಾಗಮೋಹನ್ ದಾಸ್ ಸಮಿತಿಗೆ ದೂರು ನೀಡಲಿ ಯಾವ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಸಮಿತಿಗೆ ತಿಳಿಸಲಿ ಎಂದು ಹೇಳಿದರು.
ಕೇAದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಸಚಿವೆ ನಿರ್ಮಾಲ ಸೀತಾರಾಮನ್ 5300 ಕೋಟೆ
ಬಜೆಟ್ನಲ್ಲಿ ಘೋಷಿಸಿದ್ದರು. ಆದರೆ ಇದೂವರೆಗೆ ಭದ್ರಾ ಯೋಜನೆಗೆ ಒಂದು ನಯಾಪೈಸೆ ಕೊಟ್ಟಿಲ್ಲ. ಯಾಕೆ ಎಂಬುದನ್ನು ರಾಜ್ಯದ ಸಂಸದರು ಕೇಳಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ನಾನು ಸೇರಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ನಿರ್ಮಾಲ ಸಿತಾರಾಮನ್ಹಾ ಗೂ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು ಕೂಡ ಹಣ ನೀಡಿಲ್ಲ ಎಂದು ದೂರಿದರು.
ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಒಂದು ವರ್ಷ ಟ್ಯಾಕ್ಸ್ ಬೇಡ ಎಂದು ಹೇಳಿದ್ದರು ನರೇಂದ್ರ ಮೋದಿ ಆಗ ಹೇಳಿದ್ದು ದೇಶ ವಿರೋಧಿ ಹೇಳಿಕೆಯೇ ಎಂದು ಪ್ರಶ್ನಿಸಿ, ಮಿಸ್ಟರ್ ಮೋದಿ ಅವರಿಂದ ಆಗ ಒಂದು ಮಾತು, ಈಗ ಒಂದು ಮಾತು ಎಂದು ಲೇವಡಿ ಮಾಡಿದರು.
ಈ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ, ಡಿ.ಸುಧಾಕರ್, ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ
ಸಂಸದ ಬಿ.ಎನ್.ಚಂದ್ರಪ್ಪ, ಹೆಚ್. ಆಂಜನೇಯ ಹಾಜರಿದ್ದರು


