Thursday, July 23, 2026
Homeರಾಜ್ಯರಾಮನಗರ : ಲಾರಿ-ಟಿಟಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು.

ರಾಮನಗರ : ಲಾರಿ-ಟಿಟಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು.

ರಾಮನಗರ : ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತರು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ. ಸದ್ಯ ಆರು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಚನ್ನಪಟ್ಟಣದಿಂದ ಮೈಸೂರು‌ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಮದುವೆ ಸಮಾರಂಭ ಮುಗಿಸಿಕೊಂಡು ಕುಟುಂಬ ಸಮೇತ ವಾಪಸ್ ತೆರಳುತ್ತಿದ್ದ ಟಿಟಿ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular