Sunday, July 26, 2026
Homeಜಿಲ್ಲೆಮಂಗಳೂರು : ನಿಯಂತ್ರಣ ತಪ್ಪಿ ನಿಂತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಕಾರು,ಓರ್ವನಿಗೆ ಗಂಭೀರ ಗಾಯ.

ಮಂಗಳೂರು : ನಿಯಂತ್ರಣ ತಪ್ಪಿ ನಿಂತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಕಾರು,ಓರ್ವನಿಗೆ ಗಂಭೀರ ಗಾಯ.

ಮಂಗಳೂರು : ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಿಂತಿದ್ದ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವನ ತಲೆಗೆ ಗಂಭೀರ ಗಾಯವಾಗಿದೆ. ಮಂಗಳೂರಿನ ನವಭಾರತ ಸರ್ಕಲ್ ಬಳಿಯ ಹೋಟೆಲ್ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಕೆಎಸ್ ರಾವ್ ರಸ್ತೆಯಿಂದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನವಭಾರತ ವೃತ್ತದ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಮತ್ತೊಂದು ಕಾರು ಹಾಗೂ ನಿಂತಿದ್ದ ಮೂರು ಬೈಕ್ ಗಳಿಗೆ ಗುದ್ದಿದೆ.

ಸಂಚಾರ ಪೊಲೀಸರು ಸ್ಥಳಕ್ಕೆ ಡೌದಹಿಸಿದ್ದು ಹೆಚ್ಚುವರಿ ತನಿಖೆಯನ್ನು ನಡೆಸುತ್ತಿದ್ದಾರೆ..

RELATED ARTICLES

LEAVE A REPLY

Please enter your comment!
Please enter your name here

Most Popular