ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೈಕ್ ಕಳ್ಳತನವಾಗಿದೆ. ಫೆಬ್ರವರಿ 14 ರಂದು ಬುಧವಾರ ರಾತ್ರಿ ಮೂರು ಬೈಕ್ಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಧರ್ಮಸ್ಥಳ ದೇಗುಲಕ್ಕೆ ಯಾತ್ರಾರ್ಥಿಯಾಗ ಬಂದ ಕೊಪ್ಪಳದ ವ್ಯಕ್ತಿಯೊಬ್ಬರ ಬೈಕ್ ಸಹ ಕಳವು ಮಾಡಲಾಗಿದೆ.
ಮೊದಲ ಘಟನೆಯಲ್ಲಿ ಧರ್ಮಸ್ಥಳ ಗ್ರಾಮದ ಮಲ್ಲಾರ್ಮ ನಿವಾಸಿ ಬೇಬಿ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಬೇಬಿ ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಿಂದ ಬೈಕ್ ಕಾಣೆಯಾಗಿತ್ತು.ಎರಡನೇ ಘಟನೆಯಲ್ಲಿ, ಸುಳ್ಯದ ನಿವಾಸಿ ಅಖಿಲೇಶ್ ಎಂಬುವರು ಬೈಕ್ ಕಳೆದುಕೊಂಡಿದ್ದಾರೆ. ಧರ್ಮಸ್ಥಳದ ಗಡಿಭಾಗದ ಕಲ್ಮಂಜ ಗ್ರಾಮದ ಮದ್ಮಾಳ್ ಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಸಂಬಂಧಿಕರ ಮನೆ ಬಳಿ ಬೈಕ್ ನಿಲ್ಲಿಸಿದ ಬೈಕ್ ಕೂಡ ಕಾಣೆಯಾಗಿದೆ,ಬೈಕಿನ ಮೌಲ್ಯ 65,000 ರೂಪಾಯಿ ಎಂದು ಅಂದಾಜಿಸಲಾಗಿದೆ.
ಮೂರನೇ ಘಟನೆಯಲ್ಲಿ ಕೊಪ್ಪಳದಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಬಸವರಾಜ್ ಎಂಬುವರು ಬೈಕ್ ಕಳೆದುಕೊಂಡಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕಿಯೋಸ್ಕ್ ಬಳಿ ಬೈಕ್ ನಿಲ್ಲಿಸಿ ಪಕ್ಕದಲ್ಲೇ ಮಲಗಿದ್ದರು ಆದರೆ ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಕಳ್ಳತನವಾಗಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.
ಒಂದೇ ಕಳ್ಳರ ತಂಡವೇ ದಾಳಿ ಮಾಡಿರಬೇಕು ಮತ್ತು ಮೂರು ಬೈಕ್ಗಳನ್ನು ಪ್ರತ್ಯೇಕ ಘಟನೆಗಳಲ್ಲಿ ಕಳ್ಳತನ ಮಾಡಿರಬೇಕು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದ್ದು, ಹಾಗೂ ಪೊಲೀಸರು ಶಂಕಿಸಿದ್ದಾರೆ.


