Sunday, March 15, 2026
Flats for sale
Homeಜಿಲ್ಲೆಮಂಗಳೂರು: ಸಂತ ಜೆರೊಸಾ ಶಾಲೆ ಘಟನೆ : ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್‌ಗೆ ನಿರೀಕ್ಷಣಾ...

ಮಂಗಳೂರು: ಸಂತ ಜೆರೊಸಾ ಶಾಲೆ ಘಟನೆ : ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್‌ಗೆ ನಿರೀಕ್ಷಣಾ ಜಾಮೀನು.

ಮಂಗಳೂರು : ಸೈಂಟ್ ಜೆರೋಸಾ ಶಾಲೆಯ ಮುಂದೆ ಶಾಲಾ ವಿದ್ಯಾರ್ಥಿಗಳನ್ನು ಧರಣಿ ನಡೆಸಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂದಿಸಿದಂತೆ ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇವರಿಬ್ಬರಲ್ಲದೆ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಮಂಗಳೂರು ಮಹಾನಗರ ಪಾಲಿಕೆ ಕಾರ್ಪೊರೇಟರ್‌ಗಳಾದ ಸಂದೀಪ್ ಮತ್ತು ಭರತ್ ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಜೆರಾಲ್ಡ್ ಲೋಬೋ ನೀಡಿದ ದೂರಿನ ಮೇರೆಗೆ ಶಾಸಕರು ಸೇರಿದಂತೆ ಹಲವರ ವಿರುದ್ಧ ನಗರ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular