Sunday, March 15, 2026
Flats for sale
Homeದೇಶಪಾಟ್ನಾ: ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಟ್ರಕ್ 9 ಮಂದಿ ಸ್ಥಳದಲ್ಲಿ ಸಾವು.

ಪಾಟ್ನಾ: ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಟ್ರಕ್ 9 ಮಂದಿ ಸ್ಥಳದಲ್ಲಿ ಸಾವು.

ಪಾಟ್ನಾ: ಬಿಹಾರದಲ್ಲಿ ವೇಗವಾಗಿ ಬಂದ ಟ್ರಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಆಟೋರಿಕ್ಷಾದಲ್ಲಿ ಸುಮಾರು 14 ಜನರಿದ್ದರು ಎಂದು ತಿಳಿದುಬಂದಿದೆ.

9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 5 ಮಂದಿಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜುಲ್ನಾ ಗ್ರಾಮದ ಬಳಿ ಆಟೋ ಲಖಿಸಾರೈ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಪಾಟ್ನಾದ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular