Friday, March 13, 2026
Flats for sale
Homeರಾಜ್ಯವಿಜಯನಗರ : ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿದ ಕಿಡಿಗೇಡಿಗಳು ಬೆಂಕಿ ಹಚ್ಚುವುದಾಗಿ ಬೆದರಿಕೆ : ಓರ್ವನ...

ವಿಜಯನಗರ : ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿದ ಕಿಡಿಗೇಡಿಗಳು ಬೆಂಕಿ ಹಚ್ಚುವುದಾಗಿ ಬೆದರಿಕೆ : ಓರ್ವನ ಬಂಧನ.

ವಿಜಯನಗರ : ಮೈಸೂರಿಗೆ ಬರುತ್ತಿದ್ದ ಅಯೋಧ್ಯೆಧಾಮ ರೈಲಿನಲ್ಲಿ ಶ್ರೀರಾಮಭಕ್ತರ ಮುಂದೆ ಆಕ್ಷೇಪಾರ್ಹ ಪದ ಬಳಸಿದ ಅನ್ಯಕೋಮಿನ ವ್ಯಕ್ತಿಯನ್ನು ಗದಗದ ಬಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಅಯೋಧ್ಯೆ ವಿಶೇಷ ರೈಲಿಗೆ ಹೊಸಪೇಟೆ ನಿಲ್ದಾಣದಲ್ಲಿ ಯುವಕರು ಬೋಗಿ ಹತ್ತಿದರು ಈ ಬಗ್ಗೆ ಮಾತನಾಡಿದ ಪ್ರಯಾಣಿಕ ಅಯೋಧ್ಯೆ ರೈಲು ರಿಸರ್ವ್​ ಇದೆ, ಹತ್ತಬೇಡಿ ಎಂದಿದ್ದಕ್ಕೆ ವಾಗ್ವಾದ ನಡೆಸಿ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.ಆತನ ಜೊತೆ ಶಾಮೀಲಾದ ಇನ್ನುಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಹೊಸಪೇಟೆಯ ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಸ್ಟಿಯಾಗಿದ್ದು ತಕ್ಷಣ ರೈಲ್ವೆ ಪೊಲೀಸರಿಗೆ ಬೆದರಿಕೆ ಹಾಕ್ತಿರುವ ಬಗ್ಗೆ ಮಾಹಿತಿ ನೀಡಿದೆವು. ಆದರೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಬಿಟ್ಟು ಕಳಿಸಿದ್ದರು.ಇದರಿಂದ ಕೆರಳಿದ ಭಕ್ತರು ಕೆಲಹೊತ್ತು ರೈಲು ತಡೆದು ಯುವಕರನ್ನು ಬಂಧಿಸುವಂತೆ ಪ್ರತಿಭಟಿಸಲಾಗಿದೆ ಎಂದು ತಿಳಿಸಿದ್ದಾರೆ. ಗದಗ ನಿಲ್ದಾಣದಲ್ಲಿ ಓರ್ವನನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಿದ್ದಾರೆ . ಪ್ರಕರಣ ಸಂಬಂಧ ಅನ್ಯಕೋಮಿನ ನಾಲ್ವರು ಯುವಕರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಘಟನೆ ನಡೆದ ಕ್ಷಣಾರ್ಧದಲ್ಲೇ ಹೊಸಪೇಟೆ ರೈಲು ನಿಲ್ದಾಣ ರಣರಂಗ ಆಗಿಬಿಟ್ಟಿತು. ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿ, ಶ್ರೀರಾಮ ಭಕ್ತರ ಮನವೊಲಿಸಲು ಪ್ರಯತ್ನಪಟ್ಟರು. ವಿಜಯನಗರ ಎಸ್ಪಿ ಶ್ರೀಹರಿಬಾಬು, ಹೊಸಪೇಟೆಯ ಪೊಲೀಸರಿಂದಲೂ ಮನವೊಲಿಕೆಗೆ ಪ್ರಯತ್ನ ನಡೆಯಿತು. ಹಿಂದೂಪರ, ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಪ್ರಯತ್ನದಿಂದ ಕೊನೆಗೂ ಎರಡು ಗಂಟೆಗಳ ಬಳಿಕ ರೈಲು ಮೈಸೂರು ಕಡೆಗೆ ಪ್ರಯಾಣ ಬೆಳೆಸಿತು. ಮುಂಜಾಗ್ರತಾ ಕ್ರಮವಾಗಿ ಟ್ರೈನ್‌ನೊಳಗೆ ರೈಲ್ವೇ ಪೊಲೀಸರು, ಸ್ಥಳೀಯ ಪೊಲೀಸರು ಬಳ್ಳಾರಿಯವರೆಗೆ ಸಂಚಾರ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular