Thursday, March 12, 2026
Flats for sale
Homeಕ್ರೈಂಬೆಂಗಳೂರು : ಪ್ರಿಯಕರನ ಕಾಟ ತಾಳಲಾರದೆ ಯುವತಿ ಆತ್ಮಹತ್ಯೆ.

ಬೆಂಗಳೂರು : ಪ್ರಿಯಕರನ ಕಾಟ ತಾಳಲಾರದೆ ಯುವತಿ ಆತ್ಮಹತ್ಯೆ.

ಬೆಂಗಳೂರು : ಪಕ್ಕದ ಮನೆಯ ಪ್ರಿಯಕರನ ಕಾಟ ತಾಳಲಾರದೆ, ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಿಗಣಿಯ ನಂಜಾಪುರದ ಚಂದ್ರಕಲಾ (19) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದು, ಆಕೆ ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಹಿಂದೆ ಪಕ್ಕದ ಮನೆಯ ಅರುಣ್ ಕುಮಾರ್‌ನನ್ನು ಚಂದ್ರಕಲಾ ಪ್ರೀತಿಸುತ್ತಿದ್ದಳು. ಪ್ರೀತಿಯ ವಿಚಾರ ಗೊತ್ತಾಗಿ ಮನೆಯವರು ಮನೆಯವರು ಯುವತಿಗೆ ಬುದ್ಧಿವಾದ ಹೇಳಿದ್ದರು. ಅರುಣ್ ಜೈಲಿಗೆ ಹೋಗಿ ಬಂದವನಾಗಿದ್ದು, ಆತನ ನಡತೆ ಸರಿ ಇಲ್ಲ. ಆತನನ್ನು ಮದುವೆಯಾಗಬೇಡ ಎಂದು ಯುವತಿಯ ಮನವೊಲಿಸಿದ್ದರು.

ತಮ್ಮ ಪರಿಚಿತರ ಯುವಕನೊಬ್ಬನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಬೇರೆಯವನನ್ನು ಮದುವೆಯಾದರೆ ನಿನ್ನನ್ನು ಕೊಲ್ಲುವುದಾಗಿ ಅರುಣ್ ಬೆದರಿಕೆ ಹಾಕಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಚಂದ್ರಕಲಾ ಮೂರು ದಿನಗಳ ಹಿಂದೆ ದೊಡ್ಡಮ್ಮನ ಮನೆಗೆ ಹೋಗಿ ಅಲ್ಲಿ ಕೋಣೆಯಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಿಯಕರ ಆರುಣ್ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರೋಪಿ ಆರುಣ್​ಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪೋಷಕರ ಒತ್ತಾಯಿಸಿದ್ದಾರೆ. ಇನ್ನು ಮಗಳ ಸಾವಿಗೆ ಆತನೇ ಕಾರಣವೆಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದ್ರೆ, ಘಟನೆಯ ನಂತರ ಅರುಣ್‌ ಕುಮಾರ್‌ ತಲೆ ಮರೆಸಿಕೊಂಡಿದ್ದಾನೆ. ಈ ಬಗ್ಗೆ ಜಿಗಣಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular