ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕಣದ ತನಿಖೆ ಇನ್ನೇನು ನಡೆಯುತ್ತಿರುವಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ‘ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಕೇಸ್ನಲ್ಲಿ ಬಿಜೆಪಿ ಕೈವಾಡ ಇದೆ ಎಂದು ಹೇಳಲ್ಲ. ಈ ಹಿಂದೆ ನಡೆದ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡ ಇದೆ. ಈ ಹಿಂದೆ ಇಂತಹದ್ದೇ ಘಟನೆಗಳಾದಾಗ ಬಿಜೆಪಿಯ ಕೈವಾಡ ಇತ್ತು ಎಂದಿದ್ದಾರೆ.ನನಗೆ ದಿನಾಂಕ ಮತ್ತು ಘಟನೆ ನೆನಪಿಲ್ಲ. ಜೊತೆಗೆ ಅದು ತನಿಖೆಯಲ್ಲಿ ಸಾಭೀತು ಆಗಿದೆ ಎಂದು ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಹೇಳಿಕೆ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು,ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದರೆ.
ಈ ಕುರಿತಂತೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಈ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಡೆಸುತ್ತಿರುವಂತ ಸಿಸಿಬಿಯ ಅಧಿಕಾರಿಗಳು ಧಾರವಾಡ, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿಸಿವೆ.
ಪೊಲೀಸ್ ತನಿಖೆ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಲ್ಲರೂ ಸಹಕರಿಸಬೇಕೆಂದು ಕೋರಿದ್ದಾರೆ.
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ.ಎಂದು ಬೆಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


