Friday, March 13, 2026
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಬಿಸಿಲ ಝಳ,ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ,ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ...

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಬಿಸಿಲ ಝಳ,ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ,ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲು.

ಬೆಂಗಳೂರು : ರಾಜ್ಯದಲ್ಲಿ ಬಿಸಿಲ ದಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಹಲವು ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಹವಾಮಾನ ವರದಿ ಪ್ರಕಾರ, ಕರ್ನಾಟಕದ ಕರಾವಳಿ ಭಾಗದ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಈ ಬಾರಿ ಕಡು ಬೇಸಿಗೆಯಲ್ಲಿ ಕುಡಿಯಲು ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಬಾಗಲಕೋಟೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಮೋಡಕವಿದ ವಾತಾವರಣವಿದ್ದರೂ ಮಧ್ಯಾಹ್ನದ ಬಳಿಕ ಬಿಸಿಲ ಝಳ ಹೆಚ್ಚಲಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನರು ಬಿಸಿಯ ವಾತಾವರಣವನ್ನು ಎದುರಿಸುತ್ತಿದ್ದಾರೆ.

ಇಂದು ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ಚಳಿಯಾಗುತ್ತಿದೆ. ಅಲ್ಲಲ್ಲಿ ಮಂಜು ಮುಕಿಸಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ.

ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ. ಕಡಿಮೆ ಉಷ್ಣಾಂಶ ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular