Monday, March 16, 2026
Flats for sale
Homeದೇಶನವದೆಹಲಿ: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ,ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನ...

ನವದೆಹಲಿ: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ,ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನ ಮಹಿಳೆಯರಿಗೆ ಪ್ರಧಾನಿ ಮೋದಿ ಗಿಫ್ಟ್‌.

ನವದೆಹಲಿ: ‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular