ಬೆಂಗಳೂರು ; ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ದೇಶದ ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದ್ದು ಕೂಡಲೇ ಈ ಕಿಡಿಗೇಡಿಯನ್ನು ಬಂಧಿಸಿ ದೇಶದ್ರೋಹದ ಪ್ರಕರಣದ ಅಡಿಯಲ್ಲಿ ಕಾನೂನುಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿ ಪ್ರತಿಭಟನೆ ಹಾಗೂ ಪ್ರತಿಕೃತಿ ದಹಿಸಿದರು.
ಬಿಜೆಪಿ ಆರ್ ಎಸ್ ಎಸ್ ಭಾರತದ ಸಂವಿಧಾನವನ್ನು ಬುಡಮೇಲು ಮಾಡುವ ಕೃತ್ಯವನ್ನು ಮೊದಲಿನಿಂದಲೂ ಮಾಡುತ್ತಾ ಬಂದಿದೆ ದೇಶದ ಪವಿತ್ರ ಸಂವಿಧಾನದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ ಎಂಬುದು ಅವರ ನಡವಳಿಕೆ ಹಾಗೂ ಆಡಳಿತದಿಂದ ಈಗಾಗಲೇ ಸಾಬೀತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದರು.
ಚುನಾವಣೆ ಬಾಂಡ್ ಹೆಸರಿನಲ್ಲಿ ನಡೆದಿರುವ ಅಕ್ರಮದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡದೆ ಎಸ್‌ಬಿಐ ಮೂಲಕ ರಾಜಕೀಯ ಲಾಭ ಪಡೆಯುತ್ತಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ರವರ ಹತ್ತು ವರ್ಷಗಳ ದುರಾಡಳಿತ ದೇಶದ ಪ್ರತಿಯೊಬ್ಬ ಪ್ರಜೆಗೂ ಇಂದು ತಿಳಿಯುತ್ತಿದೆ. ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಆಡಳಿತದಿಂದ ಇಂದು ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ ಎಂದು ಆರೋಪಿಸಿದರು.
ಸಂವಿಧಾನದ ಬಗ್ಗೆ ಗೌರವವಿದ್ದರೆ ಪ್ರಧಾನಿ ನರೇಂದ್ರ ಮೋದಿ ಕೂಡಲೇ ದೇಶದ ಜನರ ಕ್ಷಮೆ ಕೋರಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಎಸ್ ಮನೋಹರವರು ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎ ಆನಂದ. ಪ್ರಕಾಶ್, ಹೇಮರಾಜು. ಜಯಸಿಂಹ ಪರಿಸರ ರಾಮಕೃಷ್ಣ ಬಾಲಕೃಷ್ಣ ಚೇತನ್ ಉಮೇಶ್ ಚಂದ್ರಶೇಖರ್ ಕೆ.ಟಿ. ನವೀನ್ ಮುನಿ ರಾಜು, ರಂಜಿತ್ ರವಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.