Thursday, November 6, 2025
Flats for sale
Homeರಾಜ್ಯಗಂಗಾವತಿ : ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜನಾರ್ದನರೆಡ್ಡಿ.

ಗಂಗಾವತಿ : ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜನಾರ್ದನರೆಡ್ಡಿ.

ಗಂಗಾವತಿ : ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಜಿ. ಜನಾರ್ದನರೆಡ್ಡಿ, ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ದೆಹಲಿಗೆ ತೆರಳಿದ್ದು ಕೇಂದ್ರದ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿಜೆಪಿಯ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಕೈತಪ್ಪಿದ್ದರ ಹಿನ್ನೆಲೆ ಬಿಜೆಪಿಯ ಕಾರ್ಯಕರ್ತರಲ್ಲಿ ಅಸಮಧಾನ ಭುಗಿಲೆದ್ದಿದ್ದು ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಶಾಸಕ ರೆಡ್ಡಿ, ಅಮಿತ್ ಷಾ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ಕೇಂದ್ರ ಸಕರ್ಾರದ ಗೃಹ ಮಂತ್ರಿಗಳಾದ ಅಮಿತ್ ಷಾ ಅವರ ಆಹ್ವಾನದ ಮೆರೆಗೆ ದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕನರ್ಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚಚರ್ೆ ನಡೆಸಿದ್ದಾಗಿ’ ಸ್ವತಃ ಶಾಸಕ ರೆಡ್ಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಎರಡು ಮೂರು ತಿಂಗಳ ಹಿಂದೆ ಬಿಜೆಪಿ ಪರ ಸ್ಟ್ಯಾಂಡ್ ಇರುವ ಬಗ್ಗೆ ಒಲವು ವ್ಯಕ್ತಪಡಿಸಿದ್ದ ಶಾಸಕ ರೆಡ್ಡಿ, ಬಿಜೆಪಿಗರು ಮುಂದೆ ಬಂದಲ್ಲಿ ಮೈತ್ರಿ ಮಾಡಿಕೊಂಡು ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ಇದಕ್ಕೆ ಬಿಜೆಪಿಗರಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಹೀಗಾಗಿ ಮೊನ್ನೆ ನಡೆದ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯಥರ್ಿಗೆ ಮತ ಹಾಕಿದ್ದ ರೆಡ್ಡಿ, ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದಾಗಿ ಹೇಳಿದ್ದರು. ಮತ್ತೀಗ ಷಾ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕೊಪ್ಪಳ ಸೇರಿದಂತೆ ರಾಜ್ಯದ ಎಂಟು ಹತ್ತು ಲೋಕಸಭಾ ಕ್ಷೇತ್ರದಲ್ಲಿ ಕೆಆರ್ಪಿಪಿಯಿಂದ ಸ್ವತಂತ್ರ ಅಭ್ಯಥರ್ಿಗಳನ್ನು ಕಣಕ್ಕಿಳಿಸುವುದಾಗಿ ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ರೆಡ್ಡಿ, ಇದುವರೆಗೂ ಅಭ್ಯಥರ್ಿಗಳ ಘೋಷಣೆ ಮಾಡಿಲ್ಲ. ಈ ಮಧ್ಯೆ ಷಾ ಅವರನ್ನು ಭೇಟಿ ಮಾಡಿರುವುದು ಹಲವು ಚಚರ್ೆಗೆ ಗ್ರಾಸವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular