Thursday, November 6, 2025
Flats for sale
Homeರಾಜ್ಯಬೆಂಗಳೂರು : ಅಭಿವೃದ್ಧಿಗಾಗಿ ಅಭ್ಯರ್ಥಿಯಾಗಲು ನಿರ್ಧಾರ : ಯಧುವೀರ್.

ಬೆಂಗಳೂರು : ಅಭಿವೃದ್ಧಿಗಾಗಿ ಅಭ್ಯರ್ಥಿಯಾಗಲು ನಿರ್ಧಾರ : ಯಧುವೀರ್.

ಬೆಂಗಳೂರು : ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾಗಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಪ್ರತಾಪಸಿಂಹ ಅವರು ಮೈಸೂರಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರು ತಮಗೆ ಸಹಕಾರ ನೀಡಲಿದ್ದಾರೆ ಎಂದು ನುಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೋಲಾರ ಸಂಸದ ಎಸ್.ಮುನಿಸ್ವಾಮಿ, ಶಾಸಕ ಶರಣು ಸಲಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular