ಬೆಂಗಳೂರು: ಕಳೆದ ಹಲವು ದಿನಗಳ ಹಿಂದೆ ತಾಯಿ – ಬಾಲಕಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಳಿ ಪ್ರಬಲ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡುತ್ತ ಇದ್ದಾರೆ ಎಂದು ಯಾವ ಠಾಣೆ ಹೋದರು ಪೊಲೀಸರು ಪ್ರಕರಣದ ಬಗ್ಗೆ ತಲೆಕೆಡಿಸುದಿಲ್ಲ ಎಂದು ಸಹಾಯ ಕೋರಿ ಯಡಿಯೂರಪ್ಪ ಬಳಿ ಬಂದಿದ್ದರು ಆದರೆ ಸಹಾಯಕ್ಕೆ ಬಂದ ಯುವತಿಯನ್ನು ಒಳಗೆ ಕೊಂಡುಹೋಗಿ ನಿನಗೆ ಯಾವ ರೀತಿ ಲೈಂಗಿಕ ಕಿರುಕುಳ ಕೊಟ್ಟಿದಾರೆ ತೋರಿಸು ಎಂದು ಮಾಜಿ ಮುಖ್ಯಮಂತ್ರಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.
ನ್ಯಾಯ ಕೇಳಲು ಹೋದವರ ಮೇಲೆ ಹಿರಿಯ ರಾಜಕಾರಣಿ ಈ ರೀತಿ ಮಾಡಿದ್ದೂ ಬೇಸರದ ಸಂಗತಿ ಎಂದು ಬಾಲಕಿಯ ಸಂಬಂದಿಕರು ತಿಳಿಸಿದ್ದಾರೆ. ಈ ರೀತಿ ಕಳೆದ ಫೆಬ್ರವರಿಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಡೆದ ವಿಚಾರವನ್ನು ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ ತಂದೊಡ್ಡಲಿದೆ.
ನನ್ನ ವಿರುದ್ಧದ ಅರೋಪ ನಿರಾಧಾರ : ಯಡಿಯೂರಪ್ಪ.
ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಅನೇಕ ಬಾರಿ ಬಂದು ಹೋಗುತ್ತಿದ್ದರು. ಹೀಗೆ ಬಂದವರ ಬಳಿ ಏನಾಗಿದೆ ಎಂದು ಕೇಳಿದೆ. ಈ ವೇಳೆ ಅವರು ಅನ್ಯಾಯವಾಗಿದೆ ಎಂದು ಹೇಳಿದರು.ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನಾನು ಸಹಾಯ ಮಾಡಲು ಪ್ರಯತ್ನಿಸಿದೆ. ಆದರೆ, ಅವರು ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ಇದನ್ನು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದರು.


