ಮಂಡ್ಯ : ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತ ಅಂಬರೀಶ್ಗೆ ಭಾರೀ ನಿರಾಸೆಯಾಗಿದ್ದು,. ಹೀಗಾಗಿ ಹಾಲಿ ಸಂಸದೆ ಇನ್ನು ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಈ ಬಾರಿ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತ ಎನ್ನಲಾಗಿದ್ದು ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.ನಿಖಿಲ್ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಎಚ್ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ ಎಂದು ಹೇಳಿದ್ದಾರೆ.ಜೆಡಿಎಸ್ ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ.ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ,ನಿಮ್ಮ ಆಸೆಗೆ ನಾವು ಭಂಗ ತರಲ್ಲ. ನಿಮಗೆ ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಈ ಬಾರಿಯ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್ ಸ್ಪರ್ಧೆ ಮಾಡಬೇಕೆಂದು ಒಲವು ವ್ಯಕ್ತಪಡಿಸಿದ್ದಾರೆ. ನಿಖಿಲ್ ಹಾಗೂ ಕುಮಾರಸ್ವಾಮಿ ಎಷ್ಟೇ ಮನವಿ ಮಾಡಿದರೂ ಕಾರ್ಯಕರ್ತರು ಮಾತ್ರ ಇಬ್ಬರಲ್ಲಿ ಒಬ್ಬರಾದರೂ ಸ್ಪರ್ಧಿಸಿ ಎಂದು ಪಟ್ಟು ಹಿಡಿದಿದ್ದರೆ ಇದಕ್ಕೆ ಮಾಜಿ ಸಚಿವರಾದ ಡಿಸಿ ತಮ್ಮಣ್ಣ ಹಾಗೂ ಪುಟ್ಟರಾಜು ಕೂಡ ಕಾರ್ಯಕರ್ತರ ಒತ್ತಾಯಕ್ಕೆ ಧ್ವನಿಗೂಡಿಸಿದರು. ನೀವು ಅಥವಾ ನಿಮ್ಮ ಮಗ ನಿಖಿಲ್ರನ್ನ ನಿಲ್ಲಿಸಿ, ನಾವು ಗೆಲ್ಲಿಸಿಕೊಂಡು ಬರುತ್ತೇವೆ. ನಾಮಪತ್ರ ಸಲ್ಲಿಸಿ ಹೋಗಿ, ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ ಎಂದಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ ಬಳಿಕವಂತೂ ಅಭ್ಯರ್ಥಿ ಯಾರಂದು ಕುತೂಹಲಕ್ಕೆ ಕಾರಣವಾಗಿತ್ತು. ಖುದ್ದು ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದರೆ, ಇನ್ನು ಪುಟ್ಟರಾಜು ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.ಆದರೆ ಇದೀಗ ನಿಖಿಲ್ ಕುಮಾರಸ್ವಾಮಿ ಪರ ಕಾರ್ಯಕರ್ತರು ಒಲವು ತೋರಿದ್ದು ಹಾಗೂ ಮಂಡ್ಯದ ಹಾಲಿ ಸಂಸದೆ ಸುಮಲತಾ ನಡೆ ಇನ್ನು ನಿಗೂಢವಾಗಿದ್ದು ಯಾವ ರೀತಿ ಮುಂದೆ ಸಜ್ಜಾಗುತ್ತಾರೆಂದು ಕಾದುನೋಡಬೇಕಾಗಿದೆ .


