ನವದೆಹಲಿ : ವಿಶ್ವದ ಅತಿ ದೊಡ್ಡ ಮತದಾನಕ್ಕೆ ನಾವು ತಯಾರಾಗಿದ್ದು ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ
ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.
ಏಪ್ರಿಲ್ 19ರಂದು ಮೊದಲ ಹಂತದ ಮತದಾನ
ಏಪ್ರಿಲ್ 26ರಂದು ಎರಡನೇ ಹಂತದ ಮತದಾನ
ಮೇ 7ರಂದು ಮೂರನೇ ಹಂತದ ಮತದಾನ
ಮೇ 20 ರಂದು ನಾಲ್ಕನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಮೇ 25 ರಂದು ಆರನೇ ಹಂತದ ಮತದಾನ
ಜೂನ್ 1 ರಂದು ಏಳನೇ ಹಂತದ ಮತದಾನ
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.
ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ
ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ
ಈ ಬಾರಿ ಒಟ್ಟು 97 ಕೋಟಿ ಜನರು ಮತದಾನ ಮಾಡಲಿದ್ದಾರೆ, ದೇಶಾದ್ಯಂತ 10.9 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತೆ 1.5 ಕೋಟಿ ಸಿಬ್ಬಂದಿ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ದೇಶಾದ್ಯಂತ 10.9 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತೆ 1.5 ಕೋಟಿ ಸಿಬ್ಬಂದಿ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ದೇಶದಲ್ಲಿ ಒಟ್ಟು ಪುರುಷ ಮತದಾರರ ಸಂಖ್ಯೆ 49.7 ಕೋಟಿ ದೇಶದಲ್ಲಿ ಒಟ್ಟು ಮಹಿಳಾ ಮತದಾರರ ಸಂಖ್ಯೆ 47.1 ಕೋಟಿ ದೇಶದಲ್ಲಿ ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ 1.8 ಕೋಟಿ 48,೦೦೦ ಜನ ಲಿಂಗ ಪರಿವರ್ತಿತ ಮತದಾರರಿದ್ದಾರೆ.
82 ಲಕ್ಷ ಮತದಾರರು 85 ವರ್ಷ ಮೇಲ್ಪಟ್ಟವರು 2.18 ಲಕ್ಷ ಮತದಾರರು ನೂರು ವರ್ಷ ಪೂರೈಸಿದವರಿದ್ದಾರೆ 88.4 ಲಕ್ಷ ವಿಶೇಷ ಚೇತನ ಮತದಾರರು ಇದ್ದು 40ಕ್ಕಿಂತ ಹೆಚ್ಚು ವಿಶೇಷ ಚೇತನ ಮತದಾರರಿದ್ದರೆ ವಿಶೇಷ ಸೌಲಭ್ಯ ಅವರ ಮನೆಗೆ ತೆರಳಿ ಮತ ಪಡೆಯೋ ಕೆಲಸ ಆಯೋಗ ಮಾಡಲಿದೆ.
ಕ್ರಿಮಿನಲ್ ಹಿನ್ನೆಲೆ ಇರೋ ವ್ಯಕ್ತಿಗಳು ಇದ್ದರೆ ಅವರ ವಿವರವನ್ನು ಸ್ಥಳೀಯ ಪೇಪರ್ ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ರಾಷ್ಟ್ರೀಯ ಪಕ್ಷಗಳು ಅವರ ಅಭ್ಯರ್ಥಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಪಕ್ಷಗಳು ಅವರ ಅಭ್ಯರ್ಥಿಗಳ ಬಗ್ಗೆ ಮಾಹಿತಿ ನೀಡಬೇಕು ಚುನಾವಣಾ ಸಮಯದಲ್ಲಿ ಅಕ್ರಮಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು ದೇಶದ ವಿಮಾನ ನಿಲ್ದಾಣ ರೈಲ್ವೆ ನಿಲ್ದಾಣ ಹೈ ಸೆಕ್ಯೂರಿಟಿ ತಪಾಸಣೆ ನಡೆಯಲಿದೆ. ರಸ್ತೆ ಮಾರ್ಗದಲ್ಲಿ ಅಕ್ರಮ ಹಣ ಸಾಗಾಣಿಕೆ ಬ್ರೇಕ್ ಹಾಕಲು ಚುನಾವಣಾ ಆಯೋಗ ಹದ್ದಿನ ಕಣ್ಣು ಇಡಲಿದೆ.
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ರೆ ಅಪರಾಧ ಮತದಾನ ಮುಕ್ತಾಯವರೆಗೂ ತಪ್ಪು ಸಂದೇಶ ಪ್ರಸಾರ ಮಾಡಿದ್ರೆ ಕಡಿವಾಣ ಕ್ರಮ ಕೈಗೊಳ್ಳಲಾಗಿದೆ.
ಮತದಾನ ಮುಕ್ತಾಯವರೆಗೂ ತಪ್ಪು ಸಂದೇಶ ಪ್ರಸಾರ ಮಾಡಲು ಕಡಿವಾಣ ಹಾಕಿದ್ದು ರಾಜಕೀಯ ಪಕ್ಷಗಳಿಗೂ ಚುನಾವಣಾ ಆಯೋಗದಿಂದ ಕಠಿಣ ಸಂದೇಶ ರವಾನಿಸಲಾಗಿದೆ. ರಾಜಕೀಯ ಪಕ್ಷಗಳು ಪ್ರಚಾರದ ವೇಳೆ ರೆಡ್ ಲೈನ್ ಕ್ರಾಸ್ ಮಾಡಬಾರದು ಹಾಗೂ ಚುನಾವಣಾ ಪ್ರಚಾರದ ಭಾಷಣದ ವೇಳೆ ಅಸಭ್ಯ ಶಬ್ದಗಳ ಬಳಕೆ ಬಳಸಬಾರದೆಂದು ಹೇಳಿದೆ .
ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲ ಬ್ಯಾಂಕ್ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿರ್ದೇಶ ನೀಡಿದ್ದಾರೆ.ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಕೆ ಮಾಡುವಂತಿಲ್ಲ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಹಾಗೂ ವಿಶೇಷವಾಗಿ 2100 ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.