Friday, March 13, 2026
Flats for sale
Homeರಾಜ್ಯಬೆಂಗಳೂರು : ಸಿದ್ದರಾಮಯ್ಯ ಸರಕಾರಕ್ಕೆ ತೀವ್ರ ಹಿನ್ನಡೆ : ದೇವಸ್ಥಾನ ನಿಧಿ ಬಳಕೆಗೆ ಅವಕಾಶ ನೀಡುವ...

ಬೆಂಗಳೂರು : ಸಿದ್ದರಾಮಯ್ಯ ಸರಕಾರಕ್ಕೆ ತೀವ್ರ ಹಿನ್ನಡೆ : ದೇವಸ್ಥಾನ ನಿಧಿ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್!

ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಗೆ ಸಹಿ ಹಾಕದೇ ರಾಜ್ಯಪಾಲರು ವಾಪಸ್ ಕಳುಹಿಸಿದ ಘಟನೆ ವರದಿಯಾಗಿದೆ ಇದರಿಂದ ಸಿದ್ದರಾಮಯ್ಯ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಈ ಬಗ್ಗೆ ವಿವರಣೆ ನೀಡಿದ ರಾಜಪಾಲರು ಹೈಕೋರ್ಟ್‌ನ ಧಾರವಾಡ ಪೀಠವು ರಿಟ್‌ ಅರ್ಜಿ 3440/2005ರಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ –1997 ಮತ್ತು ಅದಕ್ಕೆ ತಂದಿರುವ ತಿದ್ದುಪಡಿಗಳನ್ನು ಈಗಾಗಲೇ ವಜಾ ಮಾಡಿದೆ. ಹೈಕೋರ್ಟ್‌ ನೀಡಿದ್ದ ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಅಂತಿಮ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ತಿದ್ದುಪಡಿ ಮಾಡಬಹುದೇ ಎಂಬ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ’ ಎಂದು ಉಲ್ಲೇಖಿಸಿರುವ ರಾಜ್ಯಪಾಲರು ಕಡತವನ್ನು ವಾಪಸ್ ಕಳುಹಿಸಿದ್ದಾರೆ.

ಬಜೆಟ್ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಮುಜರಾಯಿ ತಿದ್ದುಪಡಿ ಮಸೂದೆ ತಿರಸ್ಕಾರವಾಗಿತ್ತು. ಹೀಗಾಗಿ ವಿಧಾನಸಭೆಯಲ್ಲಿ ಎರಡೆರಡು ಬಾರಿ ಮಂಡಿಸಿ ಅನುಮೋದನೆ ಪಡೆದು, ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈಗ ರಾಜ್ಯಪಾಲರು ಕೆಲವೊಂದು ಸ್ಪಷ್ಟೀಕರಣ ಕೊಡುವಂತೆ ಸರ್ಕಾರಕ್ಕೆ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ.

ಈ ಮಸೂದೆಯನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ದೇವಸ್ಥಾನಗಳ ಮಹಾಸಂಘ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು.ಹಿಂದು ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿ ತರಲಾದ ತಿದ್ದುಪಡಿಯನ್ನು ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸಿಕೊಂಡು ಈ ಮಸೂದೆ ಮಾದರಿಯಲ್ಲಿ ಯಾವುದಾದರೂ ಕಾಯ್ದೆ ಮಾಡುವ ಪರಿಕಲ್ಪನೆ ರಾಜ್ಯ ಸರ್ಕಾರಕ್ಕೆ ಇದೆಯೇ’ ಎಂದು ರಾಜ್ಯ ಪಾಲ ಗೆಹಲೋಟ್ ಪ್ರಶ್ನಿಸಿದ್ದಾರೆ. ಇನ್ನು ‘ರಾಜ್ಯಪಾಲರು ಕೇಳಿದ ವಿಷಯಗಳಿಗೆ ಸ್ಪಷ್ಟನೆ ನೀಡಿ ಮಸೂದೆಯನ್ನು ಅವರ ಒಪ್ಪಿಗೆಗೆ ಮತ್ತೆ ಕಳುಹಿಸಲಾಗುವುದು’ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.

ಸರಕಾರವನ್ನು ಪ್ರಶ್ನಿಸಿದ ರಾಜಪಾಲರು ನೀವು ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸುತ್ತೀರಾ?’ ‘ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿ ತರಲಾದ ತಿದ್ದುಪಡಿಯನ್ನು ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸಿಕೊಂಡು ಈ ಮಸೂದೆ ಮಾದರಿಯಲ್ಲಿ ಯಾವುದಾದರೂ ಕಾಯ್ದೆ ಮಾಡುವ ಪರಿಕಲ್ಪನೆ ರಾಜ್ಯ ಸರ್ಕಾರಕ್ಕೆ ಇದೆಯೇ’ ಎಂದು ರಾಜ್ಯ ಪಾಲ ಗೆಹಲೋಟ್ ಪ್ರಶ್ನಿಸಿದ್ದಾರೆ. ವಾಪಸ್ ಕಳುಹಿಸಿರುವ ಮಸೂದೆಗೆ ಸಂಬಂಧಿಸಿದ ಕಡತದಲ್ಲಿ ಈ ಕುರಿತು ಅವರು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular