ಬೆಂಗಳೂರು : ಮೇಕೆದಾಟು ವಿಚಾರದಲ್ಲಿ ಕೇಂದ್ರ ಬಿಜೆಪಿ ಸರಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಯಾವಾಗಲು ಕಾಲೆಳೆಯುವ ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ತೀವ್ರ ಮುಜುಗರಉಂಟಾಗಿದೆ .ಯಾಕೆಂದರೆ ಕೇಂದ್ರದಲ್ಲಿ I.N.D.I.A ಕೂಟ ಅಧಿಕಾರಕ್ಕೇರಿದರೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.ಈ ನಡುವೆ ಕೇಂದ್ರದಲ್ಲಿ ಅಪ್ಪತಪ್ಪಿ I.N.D.I.A ಕೂಟ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಬ್ಬರಿಗೊಬ್ಬರು ಒಡೆದಾಡಿಕೊಂಡು ಬೀಳುವಂತಹ ಪರಿಸ್ಥಿತಿ ನಿರ್ಮಾಣ ವಾಗಬಹುದು ಎಂಬುದು ವಿಶ್ಲೇಷಕರ ಮಾತು. ಈ ಪ್ರಣಾಳಿಕೆ ಒಕ್ಕೂಟದಲ್ಲೇ ಇರುವ ರಾಜ್ಯದ ಕಾಂಗ್ರೆಸ್‌ಗೆ ಭಾರಿ ಮುಖಭಂಗ ಉಂಟು ಮಾಡಿದೆ.
ಐಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪ್ರಮುಖ ಪಕ್ಷವಾಗಿದ್ದು ಕರ್ನಾಟಕದ ಕಾಂಗ್ರೆಸ್ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಪಣ ತೊಟ್ಟಿದೆ ರಾಜ್ಯದಲ್ಲಿ ಅದಕ್ಕಾಗಿ ದೊಡ್ಡ ಮಟ್ಟದ ಹೋರಾಟವನ್ನೇ ರೂಪಿಸಿದೆ.ಡಿಎಂಕೆ ಪ್ರಣಾಳಿಕೆಯಿಂದ ಬಿಜೆಪಿ ಆಕ್ರೋಶಗೊಂಡಿದ್ದು ಕಾಂಗ್ರೆಸ್‌ಗೆ ಮುಖಭಂಗವಾಗಿದೆ.
ಬೆಂಗಳೂರಿನಿಂದ 90 ಕಿ.ಮೀ. ದೂರದಲ್ಲಿರುವ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಿಸಿ ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಹರಿದು ಹೋಗುವ ನೀರನ್ನು ಸಂರಕ್ಷಿಸಿ ಕುಡಿಯುವ ನೀರಿಗೆ ಬಳಸುವ ಯೋಜನೆ ಇದಾಗಿದೆ. 9,000 ಕೋಟಿಯ ಈ ಯೋಜನೆಯಿಂದ ಬೆಂಗಳೂರು ಹಾಗೂ ರಾಜ್ಯದ ಕೆಲವೊಂದು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಬಹುದು. ಜತೆಗೆ ತಮಿಳುನಾಡಿಗೂ ಇಲ್ಲಿಂದ ಅಗತ್ಯವಿರುವ ನೀರು ಬಿಡುಗಡೆ ಮಾಡಬಹುದು ಎನ್ನುವುದು ಕರ್ನಾಟಕ ಸರ್ಕಾರದ ಲೆಕ್ಕಾಚಾರ. ಕಳೆದ ಚುನಾವಣೆಯ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ʻನಮ್ಮ ನೀರು ನಮ್ಮ ಹಕ್ಕುʼ ಹೆಸರಿನಲ್ಲಿ ದೊಡ್ಡ ಪಾದ ಯಾತ್ರೆ ನಡೆಸಿತ್ತು. ಆಗ ಅದು ಕೇಂದ್ರದ ಬಿಜೆಪಿ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ದೋಷಾರೋಪ ಮಾಡಿತ್ತು. ಇದೀಗ ಕಾಂಗ್ರೆಸ್‌ನ ಮಿತ್ರಪಕ್ಷವೇ ಮೇಕೆದಾಟು ಡ್ಯಾಂಗೆ ತಡೆ ತರುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದು ಬಿಜೆಪಿಗೆ ಅಸ್ತ್ರವಾಗಿದೆ.


