Thursday, July 23, 2026
Homeದೇಶಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್​ನಲ್ಲಿ ಹಳಿಗೆ ಹಾರಿ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ.

ಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್​ನಲ್ಲಿ ಹಳಿಗೆ ಹಾರಿ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ.

ಬೆಂಗಳೂರು : ಬೆಂಗಳೂರಿನಲ್ಲಿರುವ ಅತ್ತಿಗುಪ್ಪೆಯಲ್ಲಿ ನಮ್ಮ ಮೆಟ್ರೋ ಸ್ಟೇಷನ್​ನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಮುಂಬೈ ಮೂಲದ ನಿವಾಸಿ ಮೃತ ಯುವಕನನ್ನು ಧ್ರುವ್ ಟಕ್ಕರ್ (19) ಎಂದು ತಿಳಿದುಬಂದಿದೆ.ಸುಮಾರು ಈ 2 ಗಂಟೆ ನಡೆದಿದ್ದು . ನಮ್ಮ ಮೆಟ್ರೋ ರೈಲಿಗೆ ತಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರಿನ ನಮ್ಮ ಮೆಟ್ರೋ ಇದೀಗ ಸುಯಿಸೈಡ್ ಪಾಯಿಂಟ್ ಆಗುತ್ತಿರುವುದು ಕೇದಕರ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಲು ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಾ ನಿಂತಿದ್ದನು. ಇನ್ನು ರೈಲು ಸಂಪೂರ್ಣವಾಗಿ ಹತ್ತಿರ ಬಂದ ನಂತರ ಹಳಿಯ ಮೇಲೆ ಜಿಗಿದಿದ್ದಾನೆ. ಇನ್ನು ಹೈ ವೋಲ್ಟೇಜ್‌ ವಿದ್ಯುತ್ ಸಂಪರ್ಕ ಹಾಗೂ ಒಟ್ಟು 8 ಭೋಗಿಗಳನ್ನು ಹೊಂದಿದ ಟನ್‌ಗಟ್ಟಲೆ ಭಾರವಿರುವ ಮೆಟ್ರೋ ರೈಲು ಆತನ ದೇಹದ ಮೇಲೆ ಹರಿದಿದೆ. ಈ ವೇಳೆ ಯುವಕ ದೇಹ ಎರಡು ತುಂಡಾಗಿದೆ. ಯುವಕನ ರುಂಡ ಹಾಗೂ ಮುಂಡ ಇಬ್ಭಾಗವಾಗಿವೆ.

ಫೋನ್​ನಲ್ಲಿ ಮಾತನಾಡುತ್ತಾ ಅಲ್ಲಿಂದ ನೇರವಾಗಿ ರೈಲು ಬರುವ ಸಮಯದಲ್ಲಿ ಟ್ರ್ಯಾಕ್​ ಮೇಲೆ ಹಾರಿದ್ದಾನೆ. ಈ ವೇಳೆ ವಿದ್ಯಾರ್ಥಿ ಜೊತೆಗೆ ಓರ್ವ ಯುವತಿ ಹಾಗೂ ಮತ್ತೊರ್ವ ಇದ್ದರು. ಕೂಡಲೇ ಜೊತೆಗಿದ್ದವರು ಆತನನ್ನು ಎಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ರೈಲು ಹತ್ತಿರ ಬಂದಾಗ ಕೂಡಲೇ ಓಡಿ ಹೋಗಿದ್ದಾರೆ.ಮೃತ ಯುವಕ ಬೆಂಗಳೂರು ಬಸವನಗುಡಿಯ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಇನ್ನು ಈ ವಿದ್ಯಾರ್ಥಿಯ ಹೆಸರು ಧೃವ ಕಕ್ಕರ್ (20) ಎಂದು ತಿಳಿದುಬಂದಿದೆ. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular