Friday, March 13, 2026
Flats for sale
Homeರಾಜಕೀಯಬೆಂಗಳೂರು ; ಮಂಡ್ಯ, ಹಾಸನ, ಕೋಲಾರ ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಹೈಕಮಾಂಡ್‌ ಅಧಿಕೃತ ಘೋಷಣೆ :...

ಬೆಂಗಳೂರು ; ಮಂಡ್ಯ, ಹಾಸನ, ಕೋಲಾರ ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಹೈಕಮಾಂಡ್‌ ಅಧಿಕೃತ ಘೋಷಣೆ : ಸುಮಲತಾ ಗೆ ನಿರಾಸೆ.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೇನು ಬರುವ ತಿಂಗಳಿನಲ್ಲಿ ನಡೆಯಲಿದೆ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಯಾರಿಗಳು ಜೋರಾಗಿ ನಡೆಯುತ್ತಿವೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸೀಟ್ ಹಂಚಿಕೊಂಡು ಸ್ಪರ್ಧೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಬಿಜೆಪಿಯ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗುವ ನಿಟ್ಟಿನಲ್ಲಿ ಕಣ್ಣಿಟ್ಟಿರುವ ಹಾಲಿ ಸಂಸದೆ ಸುಮಲತಾ ಅಂಬರೀಶ್‌ಗೆ ಈಗ ಭಾರಿ ನಿರಾಸೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಎಂದು ಬಿಜೆಪಿ ಅಧಿಕೃತವಾಗಿ ಘೋಷಣೆ ಮಾಡಿದೆ.ಇದರ ಭಾಗವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ ಈಗ ಎಲ್ಲರ ಗಮನ ಸೆಳೆಯುತ್ತಿದೆ.ಈ ಕ್ಷೇತ್ರದ ಮೇಲೆ ಎಚ್ಚೆತ್ತ ಸುಮಲತಾ ಮಂಡ್ಯದಲ್ಲಿ ಸೋಮವಾರ (ಮಾ. 25) ಮುಖಂಡರ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕನಾಗಿರುವ ಅರ್ ಅಶೋಕ ಹಾರಿಕೆಯ ಉತ್ತರ ನೀಡುವ ಬದಲು ಬಾಲು ಈಗ ದೆಹಲಿ ವರಿಷ್ಠರ ಕೋರ್ಟ್ ನಲ್ಲಿದೆ ಎಂದು ಹೇಳಿದರು. ಕೇಂದ್ರ ಸಂಸದೀಯ ಮಂಡಳಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ, ಅದಕ್ಕಿಂತ ಮಿಗಿಲಾಗಿ ತಾನೇನೂ ಹೇಳುವುದು ಸಾಧ್ಯವಿಲ್ಲ ಎಂದು ಅಶೋಕ ಹೇಳಿದರು.

25 ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್​ ಎಲ್ಲಿಯು ಕೂಡ ಹಸ್ತಕ್ಷೇಪ ಮಾಡಿಲ್ಲ. ಹೀಗಾಗಿ ಅವರು ಕೇಳಿದ 3 ಕ್ಷೇತ್ರಗಳನ್ನು ಬಿಟ್ಟು ಕೊಟ್ಟಿದ್ದೇವೆ ಎಂದು ರಾಧಾ ಮೋಹನ್ ದಾಸ್ ಅವರು ಕಾರ್ಯಾಗಾರದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.ಕಳೆದ ಬಾರಿಯೇ ಮಂಡ್ಯದಂತಹ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ನಿಂತು ಗೆದ್ದು ತೋರಿಸಿದ್ದ ಸುಮಲತಾ ಅವರು ಈ ಬಾರಿ ರೆಬೆಲ್‌ ಆಗುತ್ತಾರಾ? ಜೆಡಿಎಸ್‌ಗೆ ಟ್ರಬಲ್‌ ಕೊಡುತ್ತಾರಾ? ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಯಾವುದಕ್ಕೂ ಈ ಬಗ್ಗೆ ಸೋಮವಾರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular