Thursday, July 23, 2026
Homeರಾಜ್ಯಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಲು ಹೈಕಮಾಂಡ್​ ಗ್ರೀನ್​ ಸಿಗ್ನಲ್.

ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಲು ಹೈಕಮಾಂಡ್​ ಗ್ರೀನ್​ ಸಿಗ್ನಲ್.

ಬಳ್ಳಾರಿ : ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಗೆ ಬಿಜೆಪಿ ಸೇರಲು ಹೈಕಮಾಂಡ್​ ಗ್ರೀನ್​ ಸಿಗ್ನಲ್ ನೀಡಿದೆ ಎಂಬ ಮಾಹಿತಿ ದೊರೆತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ ಈಗಾಗಲೇ ಅನೇಕ ನಾಯಕರು ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ. ಇಂತಹ ಬೆಳವಣಿಗೆ ನಡುವೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಕೂಡ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಶಾಸಕ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೆರ್ಪಡೆ ಗೊಳ್ಳುವ ಬಹುತೇಕ ಸಾಧ್ಯತೆಯಿದೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ದೊರೆತಿದೆ.ಅತ್ತ ಜನಾರ್ದನ ರೆಡ್ಡಿ ಕೂಡ ಬಿಜೆಪಿಗೆ ಸೇರಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಹಲವು ದಿನಗಳ ಹಿಂದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನ ಭೇಟಿಯಾಗಿದ್ದರು ಇದೀಗ ಒಂದಷ್ಟು ಮಾತುಕತೆಯಾಗಿ ರೆಡ್ಡಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್​ನಲ್ಲಿ ಇಂದು ಜನಾರ್ದನ ರೆಡ್ಡಿಯವರು 1:30 ಕ್ಕೆ KRPP ಪಕ್ಷದ ಸಭೆ ಕರೆದಿದ್ದು ಸಭೆಯಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಿ ಅವರ ಬೆಂಬಲರೊಂದಿಗೆ ರೆಡ್ಡಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular