ನವದೆಹಲಿ : ಕೇರಳದ ಉಳಿದ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಯನಾಡ್ ಕ್ಷೇತ್ರದಲ್ಲಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ.
ಶ್ರೀಶಂಕರ ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಆಗಿರುವ ಕೆ.ಎಸ್. ರಾಧಾಕೃಷ್ಣನ್ ಮತ್ತು ನಟ ಜಿ.ಕೃಷ್ಣಕುಮಾರ್ಕ್ರ ಮವಾಗಿ ಎರ್ನಾಕುಲಂ ಮತ್ತು ಕೊಲ್ಲಂ ಕ್ಷೇತ್ರಗಳಿAದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ.
ಸರ್ಕಾರಿ ಕಾಲೇಜಿನ ಮಾಜಿ ಪ್ರಾಂಶುಪಾಲ ಟಿ.ಎನ್.ಸರಸು ಉತ್ತರ ಪಾಲಕ್ಕಾಡ್ ಜಿಲ್ಲೆಯ ಅಲತೂರ್ ನಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಐ ನೇತೃತ್ವದ ಎಲ್ಡಿಎಫ್ ಪ್ರಾಬಲ್ಯ ಹೊಂದಿರುವ ದಶಕಗಳಷ್ಟು ಹಳೆಯ ದ್ವಿಪಕ್ಷೀಯ ರಾಜಕೀಯ ಮುರಿಯಲು ಬಿಜೆಪಿ ಪ್ರಯತ್ನಿಸುತ್ತಿದೆ.
ಪಕ್ಷ ಈ ಹಿಂದೆ 12 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಅದರ ಮಿತ್ರ ಪಕ್ಷ ಬಿಡಿಜೆಎಸ್ ರಾಜ್ಯದಲ್ಲಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಯಾದ ವಯನಾಡ್‌ನಲ್ಲಿ ಸುರೇಂದ್ರನ್ ಅವರ ಅನಿರೀಕ್ಷಿತ ಉಮೇದುವಾರಿಕೆಯೊಂದಿಗೆ, ರಾಹುಲ್ ಗಾಂಧಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ತನ್ನ ವಿರೋಧಿಗಳಿಗೆ ಸೂಕ್ತ ಉತ್ತರ ನೀಡಲು ಪ್ರಯತ್ನಿಸುತ್ತಿದೆ. ಸಿಪಿಐನ ಅನ್ನಿ ರಾಜಾ ಈ ಕ್ಷೇತ್ರದಲ್ಲಿ ರಾಜ್ಯದ ಆಡಳಿತಾರೂಢ ಎಡಪಕ್ಷಗಳ ಅಭ್ಯರ್ಥಿಯಾಗಿದ್ದಾರೆ.
ಹಲವು ವರ್ಷಗಳ ಹಿಂದೆ ಶಬರಿಮಲೆಗೆ ಯುವತಿಯರ ಪ್ರವೇಶದ ವಿರುದ್ಧ ಕೇಸರಿ ಪಕ್ಷದ ತೀವ್ರ ಆಂದೋಲನಗಳ ಮುಖವಾಗಿದ್ದ ಸುರೇಂದ್ರನ್, 2020 ರಿಂದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಭಾರತೀಯ ಜನತಾ ಯುವ ಮೋರ್ಚಾದ ವಯನಾಡ್ ಜಿಲ್ಲಾಧ್ಯಕ್ಷರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಕೋಯಿಕ್ಕೋಡ್ ಜಿಲ್ಲೆಯ ಉಳ್ಳೇರಿ ಮೂಲದ ಕುನ್ನುಮ್ಮೆಲ್ ಸುರೇಂದ್ರನ್ 2019 ರ ಲೋಕಸಭಾ ಚುನಾವಣೆಯಲ್ಲಿ ಪಥನಂತಿಟ್ಟದಿAದ ಸ್ಪರ್ಧಿಸಿ ವಿಫಲರಾಗಿದ್ದರು.
ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಆಪ್ತರಾಗಿದ್ದ ಸುರೇಂದ್ರನ್ ಅವರು 2016 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರಆ ಕ್ಷೇತ್ರದಿAದ ಕೇವಲ 89 ಮತಗಳ ಅಂತರದಿAದ ಸೋತಿದ್ದರು.