Friday, March 13, 2026
Flats for sale
Homeಕ್ರೀಡೆಬೆಂಗಳೂರು : ವಿರಾಟ್,ಕಾರ್ತಿಕ್ ಸಿಕ್ಸರ್ ಆಟಕ್ಕೆ ಪಂಜಾಬ್ ಧೂಳೀಪಟ,ಹೈ ಸೆಕ್ಯೂರಿಟಿ ನಡುವೆಯೂ ನುಗ್ಗಿ ಬಂದು ಕೊಹ್ಲಿ...

ಬೆಂಗಳೂರು : ವಿರಾಟ್,ಕಾರ್ತಿಕ್ ಸಿಕ್ಸರ್ ಆಟಕ್ಕೆ ಪಂಜಾಬ್ ಧೂಳೀಪಟ,ಹೈ ಸೆಕ್ಯೂರಿಟಿ ನಡುವೆಯೂ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ.

ಬೆಂಗಳೂರು : ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ಮುಂದೆ ಪಂಜಾಬ್ ಕಿಂಗ್ಸ್ ನೀಡಿದ 177ರನ್ ಟಾರ್ಗೆಟನ್ನು ಆರ್‌ಸಿಬಿ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಐಪಿಎಲ್ 2024ನ್ನು ಸೋಲಿನಿಂದ ಆರಂಬಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಭರ್ಜರಿ ಗೆಲುವಿನ ಮೂಲಕ ಕಮ್‌ಬ್ಯಾಕ್ ಮಾಡಿದೆ. ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಅಭಿಮಾನಿಗಳನ್ನು ಕುಣಿಸಿತ್ತು. ಕೊಹ್ಲಿ ವಿಕೆಟ್ ಪತನದ ಬಳಿಕ ತಂಡದ ಆತಂಕ ಹೆಚ್ಚಾಗಿತ್ತು. ಆದರೆ ಮಹಿಪಾಲ್ ಲೊಮ್ರೊರ್ ಹಾಗೂ ದಿನೇಶ್ ಕಾರ್ತಿಕ್ ಹೋರಾಟದಿಂದ ಆರ್‌ಸಿಬಿ ಗೆಲುವಿನ ದಡ ಸೇರಿತು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್​​ಗಳಿಂದ ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ 74 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.

ಈ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಕೊಹ್ಲಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಇನ್ನಿಂಗ್ಸ್​ನೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 100ನೇ ಬಾರಿ 50 ಕ್ಕೂ ಅಧಿಕ ರನ್ ಬಾರಿಸಿದ ದಾಖಲೆ ಬರೆದರು.

ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿರುವ ಕಿಂಗ್ ಕೊಹ್ಲಿ, 100ನೇ ಬಾರಿಗೆ 50+ ಇನ್ನಿಂಗ್ಸ್‌ಗಳನ್ನು ಆಡಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ. ವಿರಾಟ್​ಗೂ ಮೊದಲು ಕ್ರಿಸ್ ಗೇಲ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದರು.

ಡೇವಿಡ್ ವಾರ್ನರ್ ಇದುವರೆಗೆ 649 ಬೌಂಡರಿಗಳನ್ನು ಬಾರಿಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಆದರೆ ಈಗ ವಿರಾಟ್ ಕೊಹ್ಲಿ 650+ ಬೌಂಡರಿಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಈ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ. ಓರ್ವ ಅಭಿಮಾನಿ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ಕ್ರೀಸ್​ಗೆ ನುಗ್ಗಿದ್ದ ಅಭಿಮಾನಿ ಕಾಲು ಹಿಡಿದುಕೊಂಡಿದ್ದಾನೆ. ಹೈ ಸೆಕ್ಯೂರಿಟಿ ನಡುವೆಯೂ ಕೊಹ್ಲಿ ಅಭಿಮಾನಿ ಮೈದಾನಕ್ಕೆ ನುಗ್ಗಿದ್ದು, ಬಳಿಕ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಬ್ಬನ್​ ಪಾರ್ಕ್ ಠಾಣೆ ಪೊಲೀಸರಿಂದ ಯುವಕನ ವಿಚಾರಣೆ ಮಾಡಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular