ಸುಬ್ರಹ್ಮಣ್ಯ : ಏನೇ ಶುಭಕಾರ್ಯಗಳು ಆಗಬೇಕಾದರೂ ದೇವರ ಆಶೀರ್ವಾದ ಅಗತ್ಯ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು. ಉತ್ತರಕನ್ನಡ ಹಾಗೂ ಮೈಸೂರು ಜಿಲ್ಲೆಗಳಲ್ಲಿ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ.ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅತೀ ಹೆಚ್ಚಿನ ಸೀಟುಗಳನ್ನು ಗೆಲ್ಲುತ್ತದೆ ಎಂದು ಕರ್ನಾಟಕ ಸರಕಾರದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಹೇಳಿದರು.
ಅವರು 25 ಮಾರ್ಚ್ 2024 ರ ಸೋಮವಾರದಿಂದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು. ಉತ್ತರಕನ್ನಡ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಖಾಸಗಿ ಪ್ರವಾಸ ಕೈಗೊಂಡಿದ್ದೂ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರುಶನದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ನಕ್ಸಲರ ನಿರಂತರ ಭೇಟಿಯ ಬಗ್ಗೆ ಮತ್ತು ಜನರ ಆತಂಕದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಚುನಾವಣಾ ಸಮಯದಲ್ಲಿ ಎಲ್ಲಾ ಕೋವಿಗಳನ್ನು ಡೆಪಾಸಿಟ್ ಮಾಡಬೇಕೆನ್ನುವುದು ಎಲೆಕ್ಷನ್ ಕಮೀಷನ್ ಆದೇಶವಿದೆ.ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚೆಮಾಡಿ ಕೋವಿ ಡೆಪಾಸಿಟ್‌ಗೆ ಮಾಡುವಿಕೆಗೆ ಏನಾದರೂ ರಿಯಾಯಿತಿ ನೀಡಲು ಸಾಧ್ಯವಿದೆಯಾ ಎಂಬ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲು ತಿಳಿಸುತ್ತೇನೆ ಎಂದು ಹೇಳಿದರು.
ನಿನ್ನೆ ರಾತ್ರಿ 09.50 ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಡಿಕೆಶಿ ಅವರು ರಾತ್ರಿ 10.55ಕ್ಕೆ ಮಂಗಳೂರು ತಲುಪಿ, ಮಂಗಳೂರಿಂದ ರಾತ್ರಿ 11.00 ಕ್ಕೆ ರಸ್ತೆ ಮೂಲಕ ಹೊರಟು 26/03/2024 ರ 01.00 ಗಂಟೆಗಳ ಸುಮಾರಿಗೆ ಧರ್ಮಸ್ಥಳಕ್ಕೆ ಆಗಮಿಸಿ ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಬೆಳಿಗ್ಗೆ 08.00 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಡಿಕೆಶಿ ಅವರು 09.30 ಕ್ಕೆ ಧರ್ಮಸ್ಥಳದಿಂದ ಹೆಲಿಕಾಪ್ಟರ್ ಮೂಲಕ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ. ಬೆಳಗ್ಗೆ 10:00 ಗಂಟೆಗೆ ಶ್ರೀ ಕ್ಷೇತ್ರ ಕುಕ್ಕೆಯ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರದಲ್ಲಿ ಮಧ್ಯಾಹ್ನ 11:00ಕ್ಕೆ ಕಡಬದ ಬಿಳಿನೆಲೆ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಸುಮಾರು 12:30ರ ವೇಳೆಗೆ ಚಿಕ್ಕಮಗಳೂರಿಗೆ ತೆರಳಿ ಶೃಂಗೇರಿಯ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವರು. ಮಧ್ಯಾಹ್ನ 2:30 ಶೃಂಗೇರಿಯಿಂದ ಹೆಲಿಕಾಪ್ಟರ್ ಮೂಲಕ 3:30 ಕ್ಕೆ ಕೊಲ್ಲೂರಿಗೆ ಆಗಮಿಸಿ ಕೊಲ್ಲೂರಿನ ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವರು. ಸಂಜೆ 06:00ಕ್ಕೆ ಕೊಲ್ಲೂರಿನಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತಲುಪಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ದಿನಾಂಕ 27/03/2024 ರ ಬುಧವಾರದಂದು ಬೆಳಿಗ್ಗೆ 08.30ಕ್ಕೆ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವರು. 10:30ಕ್ಕೆ ಗೋಕರ್ಣದಿಂದ ರಸ್ತೆ ಮೂಲಕ ಕುಮಟಾ ಆಗಮಿಸುವ ಡಿಕೆಶಿ ಅವರು ಬೆಳಗ್ಗೆ 11:30ಕ್ಕೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆಯ ಅಂಗವಾಗಿ ಪೂರ್ವಭಾವಿಯಾಗಿ ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ. ಮಧ್ಯಾಹ್ನ 01:30 ಕುಮಟಾದಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಮಧ್ಯಾಹ್ನ 03.00 ಗಂಟೆಗೆ ಮೈಸೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 05.00ಗಂಟೆಗೆ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತಲುಪಲಿದ್ದಾರೆ.


