Friday, March 13, 2026
Flats for sale
Homeಜಿಲ್ಲೆಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು.

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು.

ಉಡುಪಿ : ಮೀನು ಹಿಡಿಯಲು ಹೋದ ಇಬ್ಬರು ಯುವಕರು ಮೀನುಗಾರಿಕಾ ಬಲೆಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ.

ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು. ಈಶ್ವರ ಮಲ್ಪೆ ಮತ್ತು ತಂಡವು ನೀರಿನಲ್ಲಿ ಮುಳುಗಿದ ಯುವಕರ ಎರಡೂ ಮೃತದೇಹಗಳನ್ನು ಯಶಸ್ವಿಯಾಗಿ ಹೊರತೆಗೆಯಲಾಯಿತು.

ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ ಮಠದ ಸೀತಾ ನದಿಗೆ ಹೋಗಿದ್ದರು. ಈ ವೇಳೆ ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular