Wednesday, March 11, 2026
Flats for sale
Homeಸಿನಿಮಾಹೊಸನಗರ : ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ ಇನ್ನಿಲ್ಲ !

ಹೊಸನಗರ : ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ ಇನ್ನಿಲ್ಲ !

ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಆರೇಳು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆಯಿಂದ ಕಲ್ಲುಕೊಪ್ಪ (ಪುರಪ್ಪೆಮನೆ) ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular