Sunday, March 8, 2026
Flats for sale
Homeರಾಜಕೀಯಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ 15 ಸ್ಥಾನಗಳಲ್ಲಿ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ 15 ಸ್ಥಾನಗಳಲ್ಲಿ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ರಾಜ್ಯದಲ್ಲಿ ಮೋದಿ ಅಲೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ ೧೫ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ. ಗ್ಯಾರಂಟಿ ಯೋಜನೆಗಳು ಚುನಾವಣೆಯಲ್ಲಿ ನಮ್ಮ ಕೈ ಹಿಡಿಯಲಿವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನಗಳನ್ನು ಗೆದ್ದೆ ಗೆಲ್ಲುತ್ತೇವೆ. ಗ್ಯಾರಂಟಿ ಯೋಜನೆಗಳು ಕೆಲಸ ಮಾಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ೨೮ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬುದು ಸರಿಯಲ್ಲ. ಅದು ಸಾಧ್ಯವಾಗದ ಮಾತು. ಕಾಂಗ್ರೆಸ್ ಪಕ್ಷ 15 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ತಮ್ಮದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಈ ಯೋಜನೆಗಳು ಚುನಾವಣೆಯಲ್ಲಿ ನಮ್ಮ ಗೆಲುವಿಗೆ ನೆರವಾಗಲಿವೆ. ಅದರಲ್ಲೂ ಮಹಿಳಾ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular