ರಾಮನಗರ : ಕಳೆದ 10 ವರ್ಷಗಳಿಂದ ದೇಶದಲ್ಲಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದರೆ ಇದಕ್ಕೆ ನರೇಂದ್ರ ಮೋದಿ ಸರಕಾರ ಕಾರಣ. ಭೃಷ್ಟಚಾರ ನಡೆಸದ ಸರಕಾರ ಹೆಗ್ಗಳಿಕೆ ಪಡೆದಿದ್ದು, ಜನರ ಹಣ ಲೂಟಿಹೋಡೆದ ಕದೀಮರು ಇಂದು ಜೈಲುವಾಸ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ದೇಶದ ಜನರು ಯಾವುದೇ ಉಗ್ರರ ದಾಳಿ ಇಲ್ಲದೆ ಸುರಕ್ಷಿತವಾಗಿ, ನೆಮ್ಮದಿಯಿಂದ ಬಾಳಬೇಕಾದರೆ ಮತ್ತು ದೇಶದ ಆರ್ಥಿಕತೆ ನಂಬರ್ 3ರ ಸ್ಥಾನಕ್ಕೇರಬೇಕಾದರೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕು. ಹಾಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ನೀವು ನಮ್ಮ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಕೆ ಬ್ರದರ್ಸ್ ಕೋಟೆಯಲ್ಲಿ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ರೋಡ್ ಶೋ ವೇಳೆ ಈ ಮನವಿಯನ್ನು ಮಾಡಿದ್ದಾರೆ
ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಆರ್ಥಿಕತೆಯಲ್ಲಿ 11ರಲ್ಲಿದ್ದ ಭಾರತವನ್ನು 5ನೇ ಸ್ಥಾನಕ್ಕೆ ತಂದಿದ್ದಾರೆ. ಅದೇ ರೀತಿಯಾಗಿ ಈಗಲೂ ಅವರನ್ನು ಗೆಲ್ಲಿಸಿದರೆ 3ನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತಾರೆ. ಆ ನಿಟ್ಟಿನಲ್ಲಿ ಅವರು ಕಾರ್ಯೋನ್ಮುಖರಾಗಿದ್ದಾರೆ. ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ಸುರಕ್ಷಿತವಾಗಿ ಇಟ್ಟಿದ್ದಾರೆ. ಹೀಗಾಗಿ ದೇಶದ ಜನರು ಮೋದಿ ಪರವಾಗಿ ಇದ್ದಾರೆ. ಇಂದಿನ ರೋಡ್ ಶೋ ನೋಡಿದರೆ ನಮ್ಮ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಐದು ಲಕ್ಷ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ನನಗೆ ಮೂಡಿದೆ. ಹೀಗಾಗಿ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಲು ಬಂದಿದ್ದೇನೆ. ನೀವು ಹಾಕುವ ಮತ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು.
ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿವೆ. ಆದರೆ, ಕಾಂಗ್ರೆಸ್ ಎಸ್ಡಿಪಿಐ ಅನ್ನು ಸಮರ್ಥನೆ ಮಾಡಿಕೊಂಡು ಬರುತ್ತಿದೆ. ಹಾಗಾದರೆ, ಜನ ಎಷ್ಟು ಸುರಕ್ಷಿತವಾಗಿದ್ದಾರೆ ಎಂಬ ಪ್ರಶ್ನೆ ಬರುವುದಿಲ್ಲವೇ? ಆದರೆ, ದೇಶದಲ್ಲಿ ಈಗ ಆಡಳಿತ ನರೇಂದ್ರ ಮೋದಿ ಅವರ ಕೈಯಲ್ಲಿ ಇರುವುದರಿಂದ ಇಡೀ ದೇಶ ಸುರಕ್ಷಿತವಾಗಿದೆ ಎಂದು ಹೇಳಿದರು.


