Friday, July 24, 2026
Homeಜಿಲ್ಲೆಕುಂದಾಪುರ : ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು,ಮೂವರಿಗೆ ಗಂಭೀರ ಗಾಯ.

ಕುಂದಾಪುರ : ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು,ಮೂವರಿಗೆ ಗಂಭೀರ ಗಾಯ.

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66 ರ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

ಕೊಲ್ಲೂರು ಮೂಕಾಂಬಿಕಾ ಪುಣ್ಯಕ್ಷೇತ್ರ ದರ್ಶನ ಮುಗಿಸಿ ಪಾಂಡಿಚೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಒಟ್ಟು ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್‌ಗಳಿಗೂ ಹಾನಿಯಾಗಿದೆ. ಗಾಯಗೊಂಡವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ದುರ್ಘಟನೆ ನಡೆದಾಗ ಅದೃಷ್ಟವಶಾತ್ ರಸ್ತೆಯಲ್ಲಿ ಹೆಚ್ಚಿನ ವಾಹನ ಸಂಚಾರ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular