ಬೆಂಗಳೂರು : ರಾಜ್ಯದ ಜನತೆಗೆ ಈ ಬಾರಿಯ ಬಿಸಿಲಿನ ಅಬ್ಬರ ದಿಗಿಲುಬಡಿದಂತೆ ಜೋರಾಗಿದೆ. ಮನೆಯಿಂದ ಹೊರಗೆ ಕಾಲಿಡೋಕೂ ಹಿಂದೇಟು ಹಾಕುತ್ತಿದ್ದು ಇಂತಹ ಸಂದರ್ಭದಲ್ಲಿ ಸೂರ್ಯನ ಬಿಸಿಲಿನಿಂದ ಹೈರಾಣಾದ ಜನರನ್ನು ತಣ್ಣಗಿಡುವಂತೆ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ರಾಜ್ಯದಲ್ಲಿ ಸೂರ್ಯನ ಅಬ್ಬರ ಯುಗಾದಿ ಹಬ್ಬದಂದು ರಾಜ್ಯದಲ್ಲಿ ಕೆಲ ಕಾಲ ಜಿಟಿ ಜಿಟಿ ಸುರಿದ ಮಳೆರಾಯ ಹೊಸತೊಡಕು ದಿನದಂದೂ ಕೂಡ ತಂಪೆರದಿದ್ದಾನೆ.
ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಏಪ್ರಿಲ್ 12,13 ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಬಯಲು ಸೀಮೆ ಭಾಗದಲ್ಲಿ ವರುಣ ದೇವ ದರ್ಶನ ಕೊಟ್ಟಿದ್ದಾನೆ. ಮುಂಡಗೋಡಿನ ಗ್ರಾಮೀಣ ಭಾಗದಲ್ಲಿ ಮಳೆ ಸುರಿದಿದೆ. ಶಿರಸಿ, ಸಿದ್ದಾಪುರ ಭಾಗದ ಹಲವು ಕಡೆ ಮೋಡ ಕವಿದ ವಾತಾವರಣ ಮುಂದುವರಿಕೆಯಾಗಿದ್ದು, ಶಿರಸಿಯ ಗ್ರಾಮೀಣ ಭಾಗದಲ್ಲಿ ಗುಡುಗು, ಸಿಡಿಲಿನ ಆರ್ಭಟ ಜೋರಾಗಿದೆ. ಇಂದಿನಿಂದ 3 ದಿನ ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗುವ ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.ವರುಣದೇವ ರಾಜ್ಯದ ಹಲವು ಜಿಲ್ಲೆಗಳಿಗೆ ಸರತಿ ಸಾಲಲ್ಲಿ ತಂಪೆರೆಯುತ್ತಿದ್ದಾನೆ. ಯುಗಾದಿ ಹಬ್ಬದಲ್ಲಿ ಮುಳುಗಿದ್ದ ಜನರಿಗೆ ಬೆಲ್ಲದಂತ ಸಿಹಿ ಬಡಿಸಿದ್ದಾನೆ.


