ಧಾರವಾಡ ; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ.ಈ ಘಟನೆಗೆ ಎಲ್ಲ ಸಂಘಟನೆಗಳು ಖಂಡಿಸಿದ್ದು ಈ ಕೊಲೆ ಮಾಡಿದ ಆರೋಪಿ ಫಯಾಜ್ನನ್ನು ಗಲ್ಲಿಗೆ ಏರಿಸಬೇಕು ಅಥವಾ ಶೂಟ್ಔಟ್ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ.
ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಪ್ರೀತಿ ನಿರಾಕರಿಸಿದ್ದಕ್ಕಾಗಿ ನೇಹಾಳನ್ನು ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರೇ, ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇದು ಲವ್ ಜಿಹಾದ್ ಎಂದು ಹೇಳುತ್ತಿವೆ. ಗೃಹ ಸಚಿವ ಜಿ ಪರಮೇಶ್ವರ ಅವರು “ಫಯಾಜ್ ಮತ್ತು ನೇಹಾ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ನಿಂದ ದೂರವಾಗಲು ಯತ್ನಿಸಿದ್ದಾಳೆ. ಹೀಗಾಗಿ ಕೊಲೆ ನಡೆದಿದೆ” ಎಂದು ಹೇಳಿದ್ದಾರೆ
23 ವರ್ಷ ವಯಸ್ಸಿನ ನೇಹಾಳನ್ನ ಆಕೆಯ ಸ್ನೇಹಿತ ಫಯಾಜ್ 11 ಬಾರಿ ಚುಚ್ಚಿ ಕೊಂದಿದ್ದಾನೆ. ಆಕೆಯ ಸಾವನ್ನು ರಾಜ್ಯವೇ ಖಂಡಿಸುತ್ತಿದ್ದು, ಕೊಲೆಗಾರನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.ನೇಹಾ ಕೊಲೆ ಪ್ರಕರಣದ ಕುರಿತಾಗಿ ಕೊಲೆಗಾರ ಫಯಾಜ್ ತಾಯಿ ಮುಮ್ತಾಜ್ ಪತ್ರಿಕ್ರಿಯಿಸಿದ್ದು, ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದು ಕಣ್ಣೀರು ಸುರಿಸಿದ್ದಾರೆ.ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ. ನನ್ನ ಮಗ ಫಯಾಜ್ಗೆ ನೇಹಾ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ಲವ್ ಬೇಡ ಅಂತ ಹೇಳಿದ್ದೆ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕು ಎಂದಿದ್ದಾರೆ.
ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ. ಫಯಾಜ್-ನೇಹಾ ಮದುವೆ ಆಗಬೇಕು ಅಂತ ಇದ್ದರು. ಮಗ ಕೆಎಎಸ್ ಅಧಿಕಾರಿ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಈ ರೀತಿ ಆಗಿದ್ದಕ್ಕೆ ಬಹಳ ಸಂಕಟ ಆಗುತ್ತೆ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.


