Friday, March 13, 2026
Flats for sale
Homeಜಿಲ್ಲೆಬೆಳ್ತಂಗಡಿ : ಮನೆಗೆ ನುಗ್ಗಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ.

ಬೆಳ್ತಂಗಡಿ : ಮನೆಗೆ ನುಗ್ಗಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ.

ಬೆಳ್ತಂಗಡಿ : ಕಾಡು ಪ್ರಾಣಿಗಳು ಹಾಗೂ ಮಾನವ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಳೆದ 6 ತಿಂಗಳಿಂದ ಅನೇಕ ಜನರು ಬಲಿಯಾಗಿದ್ದಾರೆ.ಆದರೆ ಇದೀಗ ವೇಣೂರಿನ ಪಚ್ಚೇರಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳೀಯ ನಿವಾಸಿ ಕೃಷ್ಣಾನಂದ ಭಟ್ ಎಂಬುವವರ ಮನೆಗೆ ನುಗ್ಗಿದ ಚಿರತೆ ನಾಯಿಯನ್ನು ಎತ್ತಕೊಂಡು ಹೋಗಿದೆ. ಹಳ್ಳಿಗಾಡಿನ ಪ್ರದೇಶದಲ್ಲಿ ಇತ್ತೀಚಿಗೆ ಚಿರತೆ ,ಹುಲಿ,ಆನೆ ದಾಳಿಗಳು ಹೆಚ್ಚಾಗಿದ್ದು ರಾತ್ರೆಹೊತ್ತು ಸ್ಥಳೀಯರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ.

ಈ ಪ್ರದೇಶದಲ್ಲಿ ಚಿರತೆಗಳ ಓಡಾಟ ಹೆಚ್ಚಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular