Thursday, July 23, 2026
Homeಕ್ರೈಂಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ :...

ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ : ಬಾಗಲಕೋಟೆಯಿಂದ ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ. ಗಬ್ಬೂರಿನ ಹೋಟೇಲ್​ನಲ್ಲಿ ಓಡಾಡುತ್ತಿದ್ದನ್ನು ಗಮನಿಸಿದ ಹಿಂದೂ‌ ಜಾಗರಣಾ ವೇದಿಕೆ ಮುಖಂಡರು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡ ಬಂದಿದ್ದಾರೆ.

ಇತ್ತಿಚ್ಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲೂ ಅತಿಹೆಚ್ಚು ಪ್ರಕರಣ ದಾಖಲಾಗಿದೆ.ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ಬಲೆಬೀಸಿದ್ದುಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular