ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ದ್ವಿತೀಯ ಪಿಯುಸಿಯಲ್ಲಿ ಸಾಹಿತಿ ಪಾಸ್ ಆಗಿದ್ದಾಳೆ. ಆದರೆ ಕಡಿಮೆ ಅಂಕ ಬಂದಿದೆ ಎಂದು ಪುತ್ರಿ ಜತೆ ತಾಯಿ ಪದ್ಮಜಾ ವಾಗ್ವಾದ ಮಾಡಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಪದ್ಮಜಾಗೆ 4-5 ಕಡೆ ಸಾಹಿತಿ ಚಾಕು ಇರಿದಿದ್ದು ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ ಎಂದು ತಿಳಿದುಬಂದಿದೆ.
ಸದ್ಯ ಪದ್ಮಜಾ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.