ಮಂಗಳೂರು : ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (60) ಮೃತಪಟ್ಟ ಘಟನೆ ವರದಿಯಾಗಿದೆ.
ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದ ಅವರು ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದು ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು.
ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆವತಿಯಿಂದ ನಿನ್ನೆ ಬುಧವಾರ ರಾತ್ರಿ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಯಕ್ಷಗಾನದ ಆಭರಣ ತೆಗೆದಿಟ್ಟು ಬಳಿಕ ಚೌಕಿಗೆ ಆಗಮಿಸಿ ಕಿರೀಟ,, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.


