Thursday, July 23, 2026
Homeಜಿಲ್ಲೆಮಂಗಳೂರು : ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ,ಅಪ್ರಾಪ್ತ ಯುವಕ ಅರೆಸ್ಟ್ .

ಮಂಗಳೂರು : ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ,ಅಪ್ರಾಪ್ತ ಯುವಕ ಅರೆಸ್ಟ್ .

ಮಂಗಳೂರು : ಇತ್ತಿಚ್ಚಿನ ದಿನಗಳಲ್ಲಿ ಟಾಯ್ಲೆಟ್ ,ಬಾತ್ರೂಮ್ ,ಹಾಗೂ ಇನ್ನಿತರ ಸ್ಥಳಗಳಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ರೆಕಾರ್ಡ್ ಮಾಡುವುದು ಒಂದು ಹವ್ಯಾಸವಾಗಿಬಿಟ್ಟಿದೆ ಅದೊಂದು ಚಟ ಅಂತಾನೂ ಹೇಳಬಹುದು.ಇದೀಗ ಮಂಗಳೂರಿನ ಬಾವುಟಗುಡ್ಡೆಯಲ್ಲಿಇರುವ ಪ್ರತಿಷ್ಠಿತ ಹೆಸರುವಾಸಿಯಾಗಿರುವ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ್ದ ಅಪ್ರಾಪ್ತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

17 ವರ್ಷದ ಯುವಕ ಅಪ್ರಾಪ್ತನಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಮೇ‌ 6 ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತನು ಬಳಿಕ ಲೇಡಿಸ್ ಟಾಯ್ಲೆಟ್​ಗೆ ಹೋಗಿ ಅಲ್ಲಿ ತನ್ನ ಮೊಬೈಲ್ ಇಟ್ಟಿದ್ದನು. ಆದರೆ ಮೊಬೈಲ್ ಒಳಗೆ ಇಟ್ಟಿದ್ದ ವೇಳೆಯೇ ಯಾವುದೋ ಫೋನ್ ಕಾಲ್ ಬಂದಿದ್ದರಿಂದ ಮೊಬೈಲ್ ರಿಂಗ್ ಆಗಿದೆ. ಈ ವೇಳೆ ಕಾಲೇಜಿನ ವಾಚ್​ಮೆನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹದಿನೇಳು ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular