Saturday, March 14, 2026
Flats for sale
Homeರಾಜ್ಯಬೆಂಗಳೂರು ; ರಾಜ್ಯದ 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ , ಘಟಾನುಘಟಿಗಳ ಭವಿಷ್ಯ ನಿರ್ಧಾರ !

ಬೆಂಗಳೂರು ; ರಾಜ್ಯದ 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ , ಘಟಾನುಘಟಿಗಳ ಭವಿಷ್ಯ ನಿರ್ಧಾರ !

ಬೆಂಗಳೂರು ; ರಾಜ್ಯದಲ್ಲಿಂದು ಲೋಕಸಭೆಗೆ 2ನೇ ಹಂತದಲ್ಲಿ ಮತದಾನ ನಡೆದಿದ್ದು, ಬಾಕಿ ಉಳಿದಿದ್ದ14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಇನ್ನು ಮೊದಲನೇ ಹಂತಕ್ಕೆ ಎರಡನೇ ಹಂತದಲ್ಲಿ ಭರ್ಜರಿ ಮತದಾನ ಆಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇಕಡಾ 69.37ರಷ್ಟು ಮತದಾನವಾಗಿದೆ. ಸಿಟಿ ಮಂದಿಗೆ ಹೋಲಿಸಿದ್ರೆ ಹಳ್ಳಿ ಮಂದಿ ಭರ್ಜರಿ ವೋಟಿಂಗ್ ಮಾಡಿದ್ದಾರೆ. ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕದ 14 ಕ್ಷೇತ್ರದಲ್ಲಿ ಬಿರುಸಿನ ಮತದಾನವಾಗಿದೆ. ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.

ಕೆಲವೆಡೆ ಮತಯಂತ್ರ ದೋಷದಿಂದ ಮತದಾನ ವಿಳಂಬವಾಗಿದ್ದನ್ನು ಹೊರತುಪಡಿಸಿದರೆ, ಉಳಿದಂತೆ ಮತದಾನ ಎಲ್ಲೆಡೆ ಸುಗಮವಾಗಿ ಸಾಗಿದೆ.2 ನೇ ಹಂತದ ಮತದಾನ ನಡೆದಿರುವ 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ರಾಜಕೀಯ ಭವಷ್ಯವನ್ನು ಮತದಾರ ಇವಿಎಂನ ಬಟನ್ ಒತ್ತುವ ಮೂಲಕ ನಿರ್ಧಾರ ಮಾಡಿದ್ದು,ಮತದಾರರ ತೀರ್ಪು ಏನೆಂಬುದು ಮತ ಎಣಿಕೆ ನಡೆಯುವ ಜೂ. 4 ರಂದು ಬಹಿರಂಗವಾಗಲಿದೆ.

14 ಲೋಕಸಭಾ ಕ್ಷೇತ್ರಗಳ ಮತದಾನ ಎಲ್ಲೆಡೆ ಶಾಂತಿಯುತವಾಗಿ ನಡೆದಿದ್ದು, ಮತಗಟ್ಟೆಗಳಿಗೆ ಬಿಗಿ ಪೊಲೀಸ್ಬಂ ದೋಬಸ್ತ್ ಮಾಡಲಾಗಿದ್ದು, ಎಲ್ಲೂ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.ನಿನ್ನೆ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್,ಬಸವರಾಜ್ ಬೊಮ್ಮಾಯಿ ಇವರುಗಳು ಮತ ಚಲಾಯಿಸಿದ್ದು, ಹಾಗೆಯೇ ಕೇಂದ್ರ ಸಚಿವ ಪ್ರಲ್ಹಾದ್‌ಜೋಷಿ, ಭಗವಂತಕೂಬಾ ಸೇರಿದAತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ರಾಜ್ಯದ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉತ್ತರಕನ್ನಡ, ಬಳ್ಳಾರಿ ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.

ಬಿರು ಬಿಸಿಲಿನ ಕಾರಣ ಹಲವೆಡೆ ಮತದಾರರಿಗೆ ತಂಪು ಪಾನೀಯ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಪೆಂಡಾಲ್ ಹಾಕಿ ಬಿಸಿಲಿನ ಝಳದಿಂದ ಜನರನ್ನು ರಕ್ಷಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಎಷ್ಟು ಮತದಾನ?
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಮಂಡ್ಯದಲ್ಲಿ (ಶೇ 81.67), ಕೋಲಾರದಲ್ಲಿ (ಶೇ 78.27) ಮತ್ತು ತುಮಕೂರಿನಲ್ಲಿ (ಶೇ 78.05 ರಷ್ಟು) ಅತಿ ಹೆಚ್ಚು ಮತದಾನವಾಗಿತ್ತು. ಬೆಂಗಳೂರು ಸೆಟ್ರಲ್​​​ನಲ್ಲಿ ಶೇ 54.06, ಬೆಂಗಳೂರು ದಕ್ಷಿಣದಲ್ಲಿ ಶೇ 53.17, ಬೆಂಗಳೂರು ಉತ್ತರದಲ್ಲಿ ಶೇ 54.45 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಶೇ 68.30ರಷ್ಟು ಮತದಾನವಾಗಿತ್ತು.

ಒಟ್ಟು 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ
ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಇದೀಗ ಎರಡನೇ ಹಂತದಲ್ಲಿ ಒಟ್ಟು 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಒಟ್ಟಾರೆ 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ ಭದ್ರವಾಗಿದ್ದು, ಯಾರು ಗೆಲ್ಲಲಿದ್ದಾರೆ? ಯಾರು ಸೋಲುತ್ತಾರೆ ಎನ್ನುವುದನ್ನು ಜೂನ್ 4 ರವರೆಗೆ ಕಾಯಬೇಕಿದೆ.

ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿಯ ಸಖಿ ಮತಗಟ್ಟೆಯಲ್ಲಿ ಮತ ಚಲಾಯಿಸಲು ಬಂದವರಿಗೆ
ತಂಪು ಪಾನೀಯ ನೀಡಲಾಗಿದೆ. ಮತಯಂತ್ರ ದೋಷ ಗದಗ ಜಿಲ್ಲೆಯ ಲಕ್ಷ್ಮೇಶ್ವರದ 4 ಮತಗಟ್ಟೆಗಳಲ್ಲಿ ಮತಯಂತ್ರದ ದೋಷ ಕಂಡು ಬಂದಿದ್ದು, ಮತಯಂತ್ರ ವನ್ನು ಬದಲಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಮತದಾನ ತಡವಾಗಿ ಆರಂಭಗೊAಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular