ಮಂಡ್ಯ ; ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ನಂತರ ಹಿಂದೂಗಳ ದಮನ ನೀತಿ ಅನುಸರಿಸುತ್ತಿರುವುದು ಬೆಳಕಿಗೆ ಬಂದಿದೆ.ಕಳೆದ ಕೆಲ ತಿಂಗಳ ಹಿಂದೆ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವು ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು.ಈ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಬಾಗಿಯಾಗಿ ಪ್ರತಿಭಟನೆ ನಡೆಸಿದ್ದರು.
ಈ ವಿಚಾರ ಕಾಂಗ್ರೆಸ್ ,ಬಿಜೆಪಿ ನಡುವೆ ವಾಕ್ಸಮರ ಉಂಟಾಗಿ ಕೊನೆಗೂ ಪ್ರತಿಭಟನೆಯ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಕೆರಗೋಡು ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಅಲ್ಲದೆ “ರೌಡಿ ಶೀಟ್ ತೆರೆಯುವ ಸಂಬಂಧ ಏಳು ದಿನದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.
ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಿಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದರು. 144 ಸೆಕ್ಷನ್ ಜಾರಿಯಾದ ಬಳಿಕವೂ ಪ್ರತಿಭಟನಾಕಾರರು ಸ್ಥಳದಿಂದ ತೆರಳದ ಹಿನ್ನೆಲೆಯಲ್ಲಿ ಲಾಠಿ ಜಾರ್ಜ್ ಮಾಡಲಾಗಿತು. ಕೊನೆಗೂ ಪೊಲೀಸರು ಧ್ವಜ ತೆರವುಗೊಳಿಸಿದ್ದರು.
ಜನವರಿ 29 ರಂದು ಹನುಮ ಧ್ವಜ ಇಳಿಸಿದ್ದನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಕೆರಗೋಡಿನಿಂದ ಮಂಡ್ಯದವರೆಗೂ ಪಾದಯಾತ್ರೆ ನಡೆಸಿದ್ದರು.ಆದರೆ ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯಕೋಮಿನ ಜನರನ್ನು ಹೆದರಿಸುವುದು, ಬೆದರಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನೆ ನೀಡಿದ್ದೀರಿ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರೀಯವಾಗಿರುವುದರಿಂದ ಏಕೆ ನಿಮ್ಮ ಮೇಲೆ ಕರಗೋಡು ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಬಾರದೆಂದು ವಿಶ್ವ ಹಿಂದೂ ಪರಿಷತ್ನ ಮೈಸೂರು ಭಾಗದ ಸಹಕಾರ್ಯದರ್ಶಿ ಚಿಕ್ಕಬಳ್ಳಿ ಬಾಲು, ಕಾರ್ತಿಕ್, ಹರೀಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ .


