ಹಾಸನ : ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಆಲೂರು ತಾಲ್ಲೂಕಿನ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12 )ಮೃತ ದುರ್ದೈವಿಗಳು.
ಮೃತ ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದು ಇಂದು ಐವರು ಬಾಲಕರು ಈಜಲು ತೆರಳಿದ್ದರು.ಕೆರೆಯಲ್ಲಿ ನಾಲ್ವರು ಮುಳುಗುತ್ತಿರುವ ಸಂದರ್ಭದಲ್ಲಿ ಬದುಕುಳಿದ ಬಾಲಕ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದು ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಸಾವನಪ್ಪಿದ್ದಾರೆ . ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಯಿಸಿದ್ದು ಮೃತದೇಹಗಳನ್ನು ಹೊರತೆಗೆಯಲಾಗಿದೆ .
ಘಟನಾ ಸ್ಥಳದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸುದ್ದಿ ತಿಳಿದು ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಆಗಮಿಸಿದ್ದು ,ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


