Friday, March 13, 2026
Flats for sale
Homeರಾಜ್ಯಬೆಂಗಳೂರು ; ಮಾಜಿ ಬಿಜೆಪಿ ಶಾಸಕ ಪ್ರೀತಂಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್...

ಬೆಂಗಳೂರು ; ಮಾಜಿ ಬಿಜೆಪಿ ಶಾಸಕ ಪ್ರೀತಂಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ.

ಬೆಂಗಳೂರು ; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಹಲವು ಪೆನ್ಡ್ರೈವ್ ಸೇರಿದಂತೆ ಮಹತ್ವದ ದಾಖಲೆಗಳು ಪತ್ತೆಯಾಗಿವೆ.

ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಸೇರಿದ ಬೆಂಗಳೂರು, ಹಾಸನ ಸೇರಿದಂತೆ ಹಲವು ಕಡೆಗಳಲ್ಲಿ ವಿಶೇಷ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ 10 ಪೆನ್ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಇವುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಎಫ್‌ಎಸ್‌ಎಲ್‌ಗೆ ರವಾನಿಸಿದ್ದಾರೆ.ಹಾಸನದ 18 ಕಡೆ ನಡೆಸಿದ ದಾಳಿಯಲ್ಲಿ ಎಸ್‌ಐಟಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ೭ ಪೆನ್ ಡ್ರೈವ್ ೬ ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ವಶಕ್ಕೆ ಪಡೆದಿದೆ.

ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್ ಡಿಸ್ಕ್ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೋಗಳನ್ನು ಪೆನ್ ಡ್ರೈವ್ ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್‌ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪವಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ, ಪ್ರೀತಂ ಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತ ಪುಟ್ಟರಾಜು, ನವೀನ್ ಗೌಡ, ಕಾರು ಚಾಲಕ ಕಾರ್ತಿಕ್, ಶಶಿ, ಚೇತನ್ ಗೌಡ ನಿವಾಸದ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular