ಮೈಸೂರು : ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನಪ್ಪಿದ ಘಟನೆ ವರದಿಯಾಗಿದೆ. ಅನಿಲ ಸೋರಿಕೆಯಿಂದ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದ್ದು ಮೈಸೂರಿನ ಯರಗನಹಳ್ಳಿಯಲ್ಲಿ ಈ ವಿದೃಹಕ ಘಟನೆ ನಡೆದಿದೆ.
ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು ಮೃತರನ್ನು ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಎಂದು ಗುರುತಿಸಲಾಗಿದೆ.
ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


